ಗ್ರಾಮೀಣ ಅಭಿವೃದ್ಧಿಗೆ ಶಿಕ್ಷಣ ಪೂರಕ
ಮುದಗಲ್: ಗ್ರಾಮೀಣ ಪ್ರದೇಶಗಳು ಅಭಿವೃದ್ಧಿಯಿಂದ ಕುಂಠಿತಗೊಳ್ಳಲು ಶಿಕ್ಷಣದ ಕೊರತೆಯೇ ಮೂಲ ಕಾರಣ ಎಂದು ಲಿಂಗಸ್ಗೂರಿನ ವಿಜಯ ಮಹಾಂತೇಶ ಶಾಖಮಠದ ಸಿದ್ದಲಿಂಗ ಸ್ವಾಮೀಜಿ ಅಭಿಪ್ರಯಪಟ್ಟರು.
ಸಮೀಪದ ಕನ್ನಾಪುರಹಟ್ಟಿ ಜವಾಹರ ನವೋದಯ ಮಹಾವಿದ್ಯಾಲಯದ 14ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ಗ್ರಾಮೀಣ ಪ್ರದೇಶಗಳು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದಾಗ ಮಾತ್ರ ದೇಶ ಪ್ರಗತಿ ಪಥದತ್ತ ಸಾಗಲು ಸಾಧ್ಯ.
ಕೇಂದ್ರ ಸರ್ಕಾರ ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕಾಗಿ ಅನೇಕ ಯೋಜನೆಗಳನ್ನು ರೂಪಿಸಿದ್ದು ಅವುಗಳನ್ನು ಮಕ್ಕಳು, ಪಾಲಕರು ಸದುಪಯೋಗ ಪಡಿಸಿಕೊಳ್ಳಬೇಕೆಂದರು.
ಉತ್ತಮ ಶಿಕ್ಷಣದಿಂದ ಉನ್ನತ ಸ್ಥಾನ: ರಾಯಚೂರು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಕಾಳೆ ಮಾತನಾಡಿ, ನಾನು ಒಂದು ಸಣ್ಣ ಕುಗ್ರಾಮದಲ್ಲಿ ಜನಸಿ ನವೋದಯದ ಮೂಲಕ ಶಿಕ್ಷಣ ಪಡೆದು ಜಿಲ್ಲಾ ಮಟ್ಟದ ಅಧಿಕಾರಿಯಾಗಲು ಅನೂಕಲವಾಯಿತು ಎಂದು ತಮ್ಮ ಬಾಲ್ಯದ ಮೆಲಕು ಹಾಕುವ ಮೂಲಕ ಮಕ್ಕಳಿಗೆ ಉತ್ತಮ ಶಿಕ್ಷಣ ಪಡೆದು ಉನ್ನತ ಹುದ್ದೆ ಪಡೆಯಲು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ನ್ಯಾಯವಾದಿ ಬಳಬಟ್ಟಿ ಮಾತನಾಡಿ, ಶಿಕ್ಷಣ ಸಂಸ್ಥೆಗಳು ವ್ಯಾಪಾರೀಕರಣಕ್ಕೆ ಇಳಿದಿದ್ದು, ಸರ್ಕಾರಿ ಶಾಲೆಗಳಿಂದ ಮಾತ್ರ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಸಾಧ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾಲಯದ ಪ್ರಾಚಾರ್ಯ ರವೀಂದ್ರ ನರಸಾಯಿ ವಹಿಸಿದ್ದರು.
ಶಿಕ್ಷಕ ಪ್ರದೀಪ ಕುಮಾರ, ಬಿ.ಎಸ್. ಪಾಟೀಲ್, ಸ್ವಾಗತವನ್ನು ಪ್ರಾಚಾರ್ಯ ರವೀಂದ್ರ ನರಸಾಯಿ ಕಾರ್ಯಕ್ರಮ ನಿರ್ವಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

