ರಾಜಿನಾಮೆ
ರಾಯಚೂರು: ಬಿಎಸ್ಸಾರ್ ಕಾಂಗ್ರೆಸ್ ಪಕ್ಷದ ರಾಜ್ಯ ಯುವ ಕಾರ್ಯದರ್ಶಿ ಕೆ.ರಾಜೇಶ್ ಕುಮಾರ್ ಪಕ್ಷ ಮತ್ತು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಈ ಕುರಿತು ರಾಜಿನಾಮೆ ಪತ್ರವನ್ನು ಯುವ ಘಟಕದ ಅಧ್ಯಕ್ಷರಿಗೆ ಸಲ್ಲಿಸಿದ್ದು, ಪಕ್ಷದಲ್ಲಿನ ಸ್ವಜನ ಪಕ್ಷಪಾತ, ಉಸಿರುಕಟ್ಟುವ ವಾತಾವರಣದ ಹಿನ್ನೆಲೆಯಲ್ಲಿ ಪಕ್ಷದಿಂದ ದೂರವುಳಿಯಲು ನಿರ್ಧರಿಸಿ ಪಕ್ಷ ಮತ್ತು ಯುವ ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾಗಿ ತಿಳಿಸಿದ್ದಾರೆ.
ಬೈಕ್ ರ್ಯಾಲಿ
ರಾಯಚೂರು: ನಗರದಲ್ಲಿ ಫೆ.13ರಂದು ಆಯೋಜಿಸಿರುವ ರಾಜ್ಯ ಮಟ್ಟದ ಎಸ್ಸಿ, ಎಸ್ಟಿ ಸಮಾವೇಶದ ಹಿನ್ನೆಲೆಯಲ್ಲಿ ಸೋಮವಾರ ನಗರದಲ್ಲಿ ಬಿಎಸ್ಸಾರ್ ಕಾಂಗ್ರೆಸ್ ನಗರ ಘಟಕದಿಂದ ಬೈಕ್ ರ್ಯಾಲಿ ಆಯೋಜಿಸಲಾಗಿತ್ತು.
ನಗರ ಘಟಕದ ಅಧ್ಯಕ್ಷ ಉಟ್ಕೂರು ರಾಘವೇಂದ್ರ ಅವರ ನೇತೃತ್ವದಲ್ಲಿ ನಡೆದ ಬೈಕ್ ರ್ಯಾಲಿಯು ನಗರದ ಬಸವೇಶ್ವರ ವೃತ್ತದಿಂದ ಪ್ರಮುಖ ರಸ್ತೆಗಳಲ್ಲಿ ಸಾಗಿತು. ಪಕ್ಷದ ನೂರಾರು ಯುವಕಾರ್ಯಕರ್ತರು ಮತ್ತು ಪ್ರಮುಖರು ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

