ರಾಯಚೂರು

ಮತದಾರರ ಹೆಚ್ಚುವರಿ ಪಟ್ಟಿ ತಯಾರಿ ಆರಂಭ

Published On :

ರಾಯಚೂರು: ನಗರ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಮಾ.7ರಂದು ನಡೆಯಲಿರುವ ಚುನಾವಣೆಗೆ ಮತದಾರರ ಪಟ್ಟಿ ಅಂತಿಮಗೊಳಿಸುವ ಪ್ರಕ್ರಿಯೆ ಜಾರಿಯಲ್ಲಿದ್ದು, ಚುನಾವಣೆ ಆಯೋಗದ ಸೂಚನೆಯಂತೆ ಜ.16ರವರೆಗೆ ಮತದಾರರ ಪಟ್ಟಿಗೆ ಸೇರ್ಪಡೆಗೊಂಡವರಿಗೆ ಮತದಾನಕ್ಕೆ ಅವಕಾಶ ನೀಡಲಾಗುತ್ತಿದೆ. ಹೀಗಾಗಿ ಮತದಾರರ ಸಂಖ್ಯೆಯಲ್ಲಿ ಏರಿಕೆಯಾಗಲಿದೆ ಎಂಬ ಮಾತು ಕೇಳಿಬಂದಿದೆ.
ಮತದಾರರ ಪಟ್ಟಿಯನ್ನು ಈ ಮೊದಲು ವಿಧಾನಸಭೆಯ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಪರಿಷ್ಕರಣೆ ಕಾರ್ಯ ಕೈಗೆತ್ತಿಕೊಳ್ಳಲಾಗಿತ್ತು. ಆದರೆ ಈಗಾಗಲೇ ಪರಿಷ್ಕರಣೆ ಕಾರ್ಯ ಬಹುತೇಕ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಜ.16ರವರೆಗೆ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವ ಮತದಾರರಿಗೆ ಮತದಾನಕ್ಕೆ ಅವಕಾಶ ದೊರೆಯಲಿದೆ ಎಂದು ಚುನಾವಣೆ ವಿಭಾಗ ತಿಳಿಸಿದೆ.
ಈ ಹಿಂದೆ 2012ರ ಜ.1ರವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳಿಸಿದವರಿಗೆ ಮಾತ್ರ ಮತದಾನಕ್ಕೆ ಮಾಡಲು ಅವಕಾಶ ನೀಡುವ ಬಗ್ಗೆ ಕೇಳಿಬಂದಿತ್ತು. ಆದರೆ ಆಯೋಗವು ಅಧಿಸೂಚನೆ ಹೊರಡಿಸಿದ ದಿನದವರೆಗೆ ಪಟ್ಟಿಯಲ್ಲಿ ಸೇರ್ಪಡೆಯಾದ ಎಲ್ಲರಿಗೂ ಮತದಾನ ಮಾಡುವ ಹಕ್ಕು ಒದಗಿಸಲು ನಿರ್ಧರಿಸಿದೆ.
ಈ ಹಿನ್ನೆಲೆಯಲ್ಲಿ ಈಗಾಗಲೇ ಚುನಾವಣೆ ವಿಭಾಗವು ಈಗಾಗಲೇ ಅಭ್ಯರ್ಥಿ ಆಕಾಂಕ್ಷಿಗಳಿಗೆ ಮತದಾರರ ಪಟ್ಟಿ ನೀಡಿದ್ದರೂ ಹೊಸದಾಗಿ ಹೆಚ್ಚುವರಿ ಮತದಾರರ ಪಟ್ಟಿ ಸಿದ್ಧತೆಯಲ್ಲಿ ತೊಡಗಿದೆ. ಒಂದೆರಡು ದಿನಗಳಲ್ಲಿ ಈ ಪಟ್ಟಿ ತಯಾರಿಕೆ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

ನಾಮಪತ್ರ ಸಲ್ಲಿಕೆ ಇಲ್ಲ
ರಾಯಚೂರು: ಜಿಲ್ಲೆಯಲ್ಲಿ ನಗರ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಮಾ.7ರಂದು ನಡೆಯಲಿರುವ ಚುನಾವಣೆಯ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ದೊರೆತಿದ್ದು, ಸೋಮವಾರ ಯಾವುದೇ ನಾಮಪತ್ರ ಜಿಲ್ಲೆಯಲ್ಲಿ ಸಲ್ಲಿಕೆಯಾಗಿಲ್ಲ ಎಂದು ಜಿಲ್ಲಾ ಚುನಾವಣೆ ವಿಭಾಗ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.