ಸಚಿವರ ವರ್ತನೆಗೆ ಟಿಯುಸಿಐ ಖಂಡನೆ
ರಾಯಚೂರು: ತೀವ್ರ ಬರಕ್ಕೆ ತುತ್ತಾದ ಜಿಲ್ಲೆಯ ರೈತ ಕಾರ್ಮಿಕರು ಮಹಾನಗರಗಳಿಗೆ ಗುಳೆ ಹೋಗುತ್ತಿದ್ದಾರೆ. ಜನರ ಹಸಿವು ಬಡತನ ನಿರುದ್ಯೋಗವನ್ನು ಗಂಭೀರವಾಗಿ ಪರಿಗಣಿಸದ ಸರ್ಕಾರದ ಕ್ರಮ ಖಂಡಿಸಿ ಶನಿವಾರ ಸಿಂಧನೂರಿಗೆ ಆಗಮಿಸಿದ್ದ ಕೃಷಿ ಸಚಿವ ಕೃಷ್ಣ ಬೈರೇಗೌಡರಿಗೆ ಮನವಿ ಸಲ್ಲಿಸಲು ಧಾವಿಸಿದ ವಿವಿಧ ಸಂಘಟನೆಗಳ ಮುಖಂಡರನ್ನು ಬಂಧಿಸಿರುವುದನ್ನು ಟಿಯುಸಿಐ ಖಂಡಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ ಟಿಯುಸಿಐ ಸಂಘಟನೆ ಮುಖಂಡ ಡಿ.ಎಚ್. ಪೂಜಾರ್ ಪ್ರಕಟಣೆ ನೀಡಿ, ಕೆಆರ್ಎಸ್ ಜಿಲ್ಲಾ ಕಾರ್ಯದರ್ಶಿ ರಮೇಶ್ ಪಾಟೀಲ್ ಹಾಗೂ ಆರ್ವೈಎಫ್ಐ ಜಿಲ್ಲಾ ಕಾರ್ಯದರ್ಶಿ ನಾಗರಾಜ್ ಪೂಜಾರ್ ಮತ್ತು ಇತರರನ್ನು ಬಂಧಿಸಿರುವುದು ಖಂಡನೀಯ ಎಂದು ಟೀಕಿಸಿದ್ದಾರೆ. ಕುಡಿಯುವ ನೀರು ಹಾಗೂ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಮರ್ಪಕವಾಗಿ ಜಾರಿಗೊಳಿಸದೆ ಕೋಟ್ಯಂತರ ಹಣವನ್ನು ನುಂಗಿ ಹಾಕಿರುವ ಅಧಿಕಾರಿಗಳ ಮೇಲೆ ಯಾವುದೇ ಕ್ರಮ ಜರುಗಿಸದಿರುವುದು ಸಚಿವರು, ಶಾಸಕರೂ ಅಕ್ರಮದಲ್ಲಿ ಪಾಲುದಾರರು ಎನ್ನುವುದು ಸ್ಪಷ್ಟಗೊಳಿಸಿದೆ. ಈ ಕುರಿತು ಸರ್ಕಾರದ ವೈಫಲ್ಯದ ಬಗ್ಗೆ ದೂರು ಸಲ್ಲಿಸಲು ಸಚಿವ ಕೃಷ್ಣ ಬೈರೇಗೌಡರ ಬಳಿ ತೆರಳಿದ ಸಂಘಟನೆ ಕಾರ್ಯಕರ್ತರಿಂದ ಮನವಿ ಸ್ವೀಕರಿಸದಿರುವುದು ಸೌಜನ್ಯದ ಕೊರತೆಯನ್ನು ಸ್ಪಷ್ಟಗೊಳಿಸಿದೆ ಎಂದು ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

