ರಾಯಚೂರು

ಮಹಿಳೆಯರಿಗೆ ಜ್ಞಾನವಿಕಾಸ ಕಾರ್ಯಾಗಾರ

Published On :

ಮುದಗಲ್: ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಪ್ರತಿ ಕ್ಷೇತ್ರದಲ್ಲೂ ಹೆಸರು ಮಾಡಬೇಕು. ಜೊತೆಗೆ ಪುರುಷರೊಂದಿಗೆ ಸ್ಪರ್ಧೆ ನೀಡುವುದರೊಂದಿಗೆ ಮಹಿಳೆಯರು ಸ್ವಾವಲಂಬಿಗಳಾಗಬೇಕೆಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಲಿಂಗಸ್ಗೂರು ಮೇಲ್ವಿಚಾರಕ ಭಾಸ್ಕರ್ ಅಭಿಪ್ರಾಯಪಟ್ಟರು.
ಸ್ಥಳೀಯ ರಾಮಲಿಂಗೇಶ್ವರ ದೇಗುಲದಲ್ಲಿ ಬುಧವಾರ ಏರ್ಪಡಿಸಿದ್ದ ಜ್ಞಾನ ವಿಕಾಸ ಕಾರ್ಯಾಗಾರವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರು ಸಂಘ ಸಂಸ್ಥೆಗಳನ್ನು ಕಟ್ಟಿಕೊಂಡು ಸರ್ಕಾರಿ ಯೋಜನೆಗಳ ಸದುಪಯೋಗ ಪಡಿಸಿಕೊಳ್ಳುವುದರ ಜೊತೆಗೆ ಗ್ರಾಮೀಣಾಭಿವೃದ್ಧಿ ಯೋಜನೆಗಳನ್ನು ಮೈಗೂಡಿಸಿಕೊಳ್ಳುವುದರಿಂದ ಮಹಿಳೆಯರು ಆರ್ಥಿಕವಾಗಿ ಸಬಲೀಕರಗೊಳ್ಳಲು ಸಾಧ್ಯವಾಗುವುದು.
ಇದಲ್ಲದೇ ಮಹಿಳೆಯರಿಗೆ ಸಮಾಜದಲ್ಲಿನ ಸ್ಥಾನಮಾನಗಳ ಕುರಿತು ಮಾಹಿಒತಿ ನೀಡಿದರು. ಮಹಿಳಾ ಮತ್ತು ಮಕ್ಕಳ ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ನೀಲಮ್ಮ ಮಹಿಳೆಯರ ಹಕ್ಕು ಹಾಗೂ ಮಕ್ಕಳ ಬಗ್ಗೆ ಕಾರ್ಯಾಗಾರದಲ್ಲಿ ಮಾಹಿತಿ ನೀಡಿದರು. ಹನುಮಮ್ಮ, ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸೇವಾ ಪ್ರತಿನಿಧಿಗಳಾದ ಕವಿತಾ, ಅನಿತಾ, ಲಕ್ಷ್ಮೀ, ವಿಜಯಲಕ್ಷ್ಮೀ, ಶಾರದಾ, ಮತ್ತು ಜ್ಞಾನ ವಿಕಾಸ ಸಮನ್ಯ ಅಧಿಕಾರಿ ಶಕುಂತಲಾ ಸೇರಿದಂತೆ ನೂರಾರು ಮಹಿಳೆಯರು ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.