ಆಟೋ ಚಾಲಕರ ಸಭೆ ಯಶಸ್ವಿ
ಮಸ್ಕಿ: ಆಟೋ ಚಾಲಕರು ತಮ್ಮ ವಾಹನಗಳಿಗೆ ವಿಮಾ ಪಾಲಿಸಿಯನ್ನು ವಾರದೊಳಗಾಗಿ ಕಡ್ಡಾಯವಾಗಿ ಮಾಡಿಸುವಂತೆ ಸಿಪಿಐ ಸತ್ಯನಾರಾಯಣ ಸೂಚಿಸಿದರು. ಪಟ್ಟಣದ ಪೋಲೀಸ್ ಠಾಣೆಯಲ್ಲಿ ಈಚೆಗೆ ಆಯೋಜಿಸಿದ್ದ ಆಟೋ ಹಾಗೂ ಟಂಟಂ ವಾಹನಗಳ ಚಾಲಕರ ಸಭೆಯಲ್ಲಿ ಮಾತನಾಡಿ, ಚಾಲಕರು ಕಡ್ಡಾಯವಾಗಿ ತಮ್ಮ ವಾಹನಗಳಿಗೆ ವಿಮೆ ಮಾಡಿಸಿಕೊಳ್ಳಬೇಕು. ವಾಹನ ಚಾಲನಾ ಪರವಾನಗಿ ಪತ್ರವನ್ನು ಹೊಂದಿರಬೇಕೆಂದು ಸೂಚಿಸಿದರು. ಹಳೇ ಬಸ್ ನಿಲ್ದಾಣದಲ್ಲಿನ ಅಂಗಡಿಗಳ ಮಾಲೀಕರಿಗೆ ತೊಂದರೆಯಾಗದಂತೆ ವಾಹನಗಳನ್ನು ನಿಲುಗಡೆಗೊಳಿಸಬೇಕು.
ಕಾನೂನಿನಂತೆ ಪ್ರಯಾಣಿಕರನ್ನು ಹೆಚ್ಚಿನ ಪ್ರಮಾಣದಲ್ಲಿ ಕರೆದೊಯ್ಯದೇ ಸಹಕರಿಸಬೇಕು. ಸುರಕ್ಷಿತ ಪ್ರಯಾಣಕ್ಕೆ ಆದ್ಯತೆ ನೀಡುವಂತೆ ಸಲಹೆ ನೀಡಿದರು. ಕಡ್ಡಾಯವಾಗಿ ವಾಹನ ಚಾಲಕರು ಸಮವಸ್ತ್ರ ಧರಿಸಿರಬೇಕು. ತಪ್ಪಿದಲ್ಲಿ ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು. ಪಿಎಸ್ಐ ಗುರುರಾಜ ಕಟ್ಟಿಮನಿ ಹಾಗೂ ಆಟೋ ಚಾಲಕರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

