ರಾಯಚೂರು

ಪೊಲೀಸರ ವೈಫಲ್ಯಕ್ಕೆ ಖಂಡನೆ

Published On :

ಸಿಂಧನೂರು: ಬೆಂಗಳೂರಿನಲ್ಲಿ ಜು.10ರಂದು ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಓದುತ್ತಿರುವ ಯುವತಿಯ ಮೇಲೆ ಪೊಲೀಸರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಅತ್ಯಾಚಾರ ಮಾಡಿ ದೌರ್ಜನ್ಯ ನಡೆಸಿದ ಘಟನೆಯನ್ನು ಮನುಜಮತ ಬಳಗ ತೀವ್ರವಾಗಿ ಖಂಡಿಸಿದೆ.
ಈ ಕುರಿತು ಶುಕ್ರವಾರ ಹೇಳಿಕೆ ನೀಡಿರುವ ಮನುಜಮತ ಬಳಗದ ಅಧ್ಯಕ್ಷ ಡಿ.ಎಚ್.ಕಂಬಳಿ, ಗೌರವಾಧ್ಯಕ್ಷ ನರೇಂದ್ರನಾಥ, ಪ್ರಧಾನ ಕಾರ್ಯದರ್ಶಿ ಬಸವರಾಜ್ ಬಾದರ್ಲಿ ಅವರು, ತನ್ನ ಗೆಳೆಯನೊಂದಿಗೆ ಊಟ ಮುಗಿಸಿ ಮರಳಿ ತಮ್ಮ ಮನೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಕಾರನ್ನು ಮಧ್ಯರಾತ್ರಿ 12ರ ಸುಮಾರಿಗೆ ಅಡ್ಡಗಟ್ಟಿ ಲೈಂಗಿಕ ದೌರ್ಜನ್ಯ ನೀಡಿ ರಾಕ್ಷಸರಂತೆ ವರ್ತಿಸಿದ್ದಾರೆ. ಈ ಬಗ್ಗೆ ಯುವತಿ ಪೊಲೀಸರಿಗೆ ದೂರು ನೀಡಿದ್ದರೂ ಯಾವೊಬ್ಬ ಆರೋಪಿಯನ್ನೂ ಬಂಧಿಸುವಲ್ಲಿ ಪೊಲೀಸರು ವಿಫಲರಾಗಿರುವುದು ನಾಚಿಕೆಗೇಡಿನ ಸಂಗತಿ. ಬೆಂಗಳೂರಿನಂತಹ ಮಹಾನಗರಗಳಲ್ಲಿ ಮಹಿಳೆಯರ ಮೇಲೆ ವಿಪರೀತ ಲೈಂಗಿಕ ದೌರ್ಜನ್ಯ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ನಾಗರಿಕ ಸಮಾಜವನ್ನು ತಲೆತಗ್ಗಿಸುವಂತೆ ಮಾಡಿದೆ. ಇಂತಹ ಘಟನೆಗಳು ಮರುಕಳಿಸುತ್ತಿದ್ದರೂ ಸರ್ಕಾರ ಕ್ರಮ ಕೈಗೊಳ್ಳದಿರುವುದು ಶೋಚನೀಯ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.