ಸುರಾನಾ ಭೂಮಿ ವಾಪಸ್
ಕ.ಪ್ರ. ವಾರ್ತೆ ್ಣ ರಾಯಚೂರು ್ಣ ಜು. 20
ತಾಲೂಕಿನ ವಡ್ಲೂರು ಸಮೀಪದಲ್ಲಿರುವ ಸುರಾನಾ ಕೈಗಾರಿಕಾ ಘಟಕಕ್ಕೆ ಸಿಬ್ಬಂದಿಗೆ ವಸತಿ ನಿವೇಶನಕ್ಕೆ ಕೆಐಎಡಿಬಿಯಿಂದ ನೀಡಿದ್ದ 380 ಎಕರೆ ರೈತರ ಭೂಮಿಯನ್ನು ಸರ್ಕಾರ ವಾಪಸ್ ಪಡೆಯಲು ಒಪ್ಪಿಗೆ ಸೂಚಿಸಿದೆ ಎಂದು ಸ್ಥಳೀಯ ಶಾಸಕ ಡಾ. ಶಿವರಾಜ್ ಪಾಟೀಲ್ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಂಪನಿ ನಷ್ಟದಲ್ಲಿರುವುದರಿಂದ ಕಂಪನಿಯು ಕಾರ್ಮಿಕರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಆಡಳಿತ ಮಂಡಳಿ ಮತ್ತು ಆ ಕಂಪನಿಯಿಂದ ಸ್ಥಳೀಯರಿಗೆ ಯಾವುದೇ ರೀತಿಯ ಪ್ರಯೋಜನವಿಲ್ಲ ಎಂಬ ಸಂಗತಿಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಕೂಡಲೇ ನೀಡಿದ ಜಾಗವನ್ನು ವಾಪಸು ಪಡೆಯುವುದಾಗಿ ಭರವಸೆ ನೀಡಿದರು.
ಕಳೆದ ಅನೇಕ ವರ್ಷಗಳಿಂದ ಕೆಐಎಡಿಎಬಿಗೆ ಸರ್ಕಾರದಿಂದ ಯಾವುದೇ ಅನುದಾನ ಲಭ್ಯವಾಗಿಲ್ಲ. ಆದರೆ ಈ ಬಾರಿ 8 ಕೋಟಿ ಕೆಐಎಡಿಬಿಗೆ ಮಂಜೂರು ಮಾಡಿಸಲಾಗಿದೆ. ಇಲಾಖೆಯ ಕೇಂದ್ರ ಸರ್ಕಾರದ ವಿಶೇಷ ಅನುದಾನದಡಿ ಅನುದಾನ ಮಂಜೂರಾಗಿದೆ ಎಂದರು.
ಸಿಎಂ ಪ್ರವಾಸ: ಆಗಸ್ಟ್ 12 ಮತ್ತು 13ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಿಲ್ಲೆಗೆ ಆಗಮಿಸಲಿದ್ದು, 12ಕ್ಕೆ ಸಿಂಧನೂರು, ಮಾನವಿ ಹಾಗೂ ರಾಯಚೂರಿನಲ್ಲಿ 13ಕ್ಕೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ರಾಯಚೂರು ನಗರಕ್ಕೆ 24 ತಾಸು ಕುಡಿವ ನೀರಿನ ಯೋಜನೆ ಜಾರಿಗೆ 67 ಕೋಟಿ ವೆಚ್ಚದಲ್ಲಿ ಕಾಮಗಾರಿಗೆ ಕ್ರಿಯಾಯೋಜನೆ ರೂಪಿಸಿದ್ದು, ನಗರೋತ್ಥಾನ ಯೋಜನೆಯಡಿ ಮಂಜೂರಾದ 32 ಕೋಟಿ ವೆಚ್ಚದ ಕೆಲಸಗಳಿಗೆ ಸಿಎಂ ಚಾಲನೆ ನೀಡಲಿದ್ದಾರೆ. ಅದರಂತೆ ಕ್ರೀಡಾಂಗಣ ನಿರ್ಮಣ, ರಿಮ್ಸ್ ಬೋಧಕ ಆಸ್ಪತ್ರೆ ಹೊಸ ಕಟ್ಟಡದ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ತಿಳಿಸಿದರು.
ಸಭೆ: ಶಾಸಕರ ಅನುದಾನದಲ್ಲಿ ಮಂಜೂರಾದ ಅನುದಾನವನ್ನು ಸಮರ್ಪಕವಾಗಿ ಬಳಸುತ್ತಿದ್ದು, ಸ್ಥಳೀಯ ಡಾ.ಅಂಬೇಡ್ಕರ್ ರಸ್ತೆಯಿಂದ ಶಶಿಮಹಲ್ ವೃತ್ತದವರೆಗೆ ಸಿಸಿ ರಸ್ತೆ ನಿರ್ಮಾಣ, ನಗರಕ್ಕೆ 500 ಮನೆಗಳ ಮಂಜೂರು, ಮತ್ತು ರಾಯಚೂರು ಸೇರಿ ದೇವದುರ್ಗ, ಮಾನವಿ ಮತ್ತು ಲಿಂಗಸ್ಗೂರು ತಾಲೂಕುಗಳ ಗ್ರಾಮಗಳಿಗೆ ಕುಡಿಯುವ ನೀರು ವ್ಯವಸ್ಥೆಗಾಗಿ 400 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದರು.
ಮುಂದಿನ ತಿಂಗಳಿಂದ ಪ್ರತಿ ತಿಂಗಳು ಜನಸ್ಪಂದನೆ ಸಭೆ ನಡೆಸಲಾಗುವುದು. ಸಂಬಂಧಿಸಿದ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಶಾಸಕರು ತಿಳಿಸಿದರು.
ಈ ಸಂದರ್ಭ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಶಿವಶಂಕರ್, ನಗರಸಭೆ ಸದಸ್ಯ ಪಿ.ಯಲ್ಲಪ್ಪ, ಮಾಜಿ ಸದಸ್ಯರಾದ ಸುಭಾಷ್, ಶಂಶಾಲಂ, ಶಿವಕುಮಾರ್ ಸೇರಿ ಮತ್ತಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

