ರಾಯಚೂರು

ಹಕ್ಕುಪತ್ರ ವಿತರಣೆ

Published On :

ಸಿಂಧನೂರು: ಹಮಾಲರಿಗೆ ಹಕ್ಕುಪತ್ರಗಳನ್ನು ನೀಡಿದರೆ ಸಾಲದು ಅವರಿಗೆ ಆಶ್ರಯ ಯೋಜನೆಯಡಿ ಮನೆ ನಿರ್ಮಿಸಿಕೊಡುವುದರ ಜೊತೆಗೆ ಕುಡಿಯುವ ನೀರು, ರಸ್ತೆ, ಚರಂಡಿ, ವಿದ್ಯುತ್ ಸೇರಿದಂತೆ ಮೂಲ ಸೌಕರ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕ ಹಂಪನಗೌಡ ಬಾದರ್ಲಿ ಭರವಸೆ ನೀಡಿದರು. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ಕಾರ್ಯನಿರ್ವಹಿಸುವ ಸುಮಾರು 106 ಜನ ಹಮಾಲರಿಗೆ ಹೊಸಲಾಪುರ ಡಿ.ನಲ್ಲಿ ಸಿದ್ಧಪಡಿಸಿರುವ ನಿವೇಶನಗಳ ಹಕ್ಕುಪತ್ರಗಳನ್ನು ಎಪಿಎಂಸಿ ಸಭಾಂಗಣದಲ್ಲಿ ವಿತರಿಸಿ ಮಾತನಾಡಿದರು. ಎಪಿಎಂಸಿ ಅಧ್ಯಕ್ಷ ಸಣ್ಣ ಕರಿಯಪ್ಪ ವಕೀಲರು ಹರೇಟನೂರು ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯ ಶಿವನಗೌಡ ಎಲೆಕೂಡ್ಲಿಗಿ, ಎಪಿಎಂಸಿ ಉಪಾಧ್ಯಕ್ಷ ರಾಮಣ್ಣ ಹುಡಾ ಇದ್ದರು.


ನಿಸ್ವಾರ್ಥ ಸೇವೆ ಸಲ್ಲಿಸಿ
ಸಿಂಧನೂರು: ಸಹಕಾರ ಸಂಘಗಳು ಸಾಮಾಜಿಕ ಮತ್ತು ಆರ್ಥಿಕವಾಗಿ ದುರ್ಬಲವಾಗಿರುವವರನ್ನು ಗುರುತಿಸಿ ಅವರಿಗೆ ಕಡಿಮೆ ಬಡ್ಡಿದರದಲ್ಲಿ ಆರ್ಥಿಕ ಸಹಾಯ ನೀಡಬೇಕು. ನಿಸ್ವಾರ್ಥದಿಂದ ಸೇವೆ ಸಲ್ಲಿಸಬೇಕು ಎಂದು ಗುಲ್ಬರ್ಗ ಕಾಗಿನೆಲೆ ಪೀಠದ ಸಿದ್ದರಾಮಾನಂದಪುರಿ ಸ್ವಾಮೀಜಿ ಸಲಹೆ ನೀಡಿದರು. ಜೀವನಜ್ಯೋತಿ ಪತ್ತಿನ ಸೌಹಾರ್ದ ಸಹಕಾರಿಯ ನೂತನ ಪ್ರಾರಂಭೋತ್ಸವ ಹಾಗೂ 35ನೇ ಕನಕಾರಾಧನೆ ಸಮಾರಂಭದಲ್ಲಿ ಸಹಕಾರಿ ಕಚೇರಿ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಮಾತನಾಡಿದ ಮುಕ್ತ ಪತ್ತಿನ ಸೌಹಾರ್ದ ಸಹಕಾರಿಯ ಅಧ್ಯಕ್ಷ ವೀರಭದ್ರಪ್ಪ ಕುರುಕುಂದಿ, ಮನುಷ್ಯನ ಜೀವನ ವ್ಯವಹಾರವಾಗಬಾರದು. ಧಾರ್ಮಿಕ ತತ್ವದ ತಳಹದಿಯಲ್ಲಿ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿದರು. ಪತ್ರಕರ್ತ ಡಿ.ಎಚ್. ಕಂಬಳಿ ಮಾತನಾಡಿ, ಸಹಕಾರ ಸಂಘಗಳು ಕೇವಲ ಲಾಭದ ಉದ್ದೇಶ ಹೊಂದಿರದೆ ಸಾಮಾನ್ಯ ವರ್ಗದ ಜನರ ಬದುಕು ರೂಪಿಸುವ ಬ್ಯಾಂಕುಗಳಾಗಿ ಹೊರಹೊಮ್ಮಿದರೆ ಮಾತ್ರ ಬ್ಯಾಂಕಿನ ಉದ್ದೇಶ ಈಡೇರಲು ಸಾಧ್ಯವೆಂದು ಹೇಳಿದರು. ಜಿಪಂ ಮಾಜಿ ಸದಸ್ಯ ಕೆ. ಕರಿಯಪ್ಪ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಬೀರಪ್ಪ ಶಂಭೋಜಿ, ದಸ್ತಾವೇಜು ಬರಹಗಾರ ವೆಂಕಣ್ಣ ಜೋಷಿ ಮಾತನಾಡಿದರು. ಸಹಕಾರಿಯ ಅಧ್ಯಕ್ಷ ಗ್ಯಾನಪ್ಪ ಕನ್ನಾಪೇಟಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.