ರಾಯಚೂರು

ಸ್ವಾತಂತ್ರ್ಯ ದಿನ ಪೂರ್ವಭಾವಿ ಸಭೆ

Published On :

ಯಾದಗಿರಿ: ಜಿಲ್ಲಾಡಳಿತ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿ ಮನೋಜ್ ಜೈನ್ ತಿಳಿಸಿದರು. ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಆ.15ರಂದು ಬೆಳಗ್ಗೆ 7.45ಕ್ಕೆ ಧ್ವಜಾರೋಹಣ ನೆರವೇರಿಸಿ, 8.30ಕ್ಕೆ ಎಲ್ಲ ಸರ್ಕಾರಿ ನೌಕರರು ಕ್ರೀಡಾಂಗಣಕ್ಕೆ ಕಡ್ಡಾಯವಾಗಿ ಆಗಮಿಸುವಂತೆ ಸೂಚಿಸಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ವ ಧ್ವಜಾರೋಹಣ ನೆರವೇರಿಸಲಿದ್ದು, ಅಧಿಕಾರಿಗಳು ಇದಕ್ಕೆ ಎಲ್ಲಾ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು. ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಮತ್ತು ಶಾಲಾ ಕಾಲೇಜುಗಳಲ್ಲಿ ಯಾವುದೇ ಲೋಪ ಆಗದಂತೆ ಎಚ್ಚರ ವಹಿಸಿ ಗೌರವದೊಂದಿಗೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಲು ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.