ನಗರದಲ್ಲಿ ಸಾರಿಗೆ ಅದಾಲತ್ 25ಕ್ಕೆ
ರಾಯಚೂರು: ಇಲ್ಲಿನ ಸಾರಿಗೆ ಇಲಾಖೆಯಲ್ಲಿ ಕಾರ್ಯಾಚರಣೆಗಳು ಸುಗಮವಾಗಿ ಸಕಾಲಕ್ಕೆ ನಡೆಸಲು ಅನುಕೂಲವಾಗುವಂತೆ ಸಾರ್ವಜನಿಕರ ಅಹವಾಲು ಆಲಿಸಲು ಜೂ.25ರಂದು ಸಾರಿಗೆ ಅದಾಲತ್ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 11ಕ್ಕೆ ನಗರದ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಗುಲ್ಬರ್ಗದ ಉಪ ಸಾರಿಗೆ ಆಯುಕ್ತರು ಅದಾಲತ್ ನಡೆಸಲಿದ್ದು, ಮೋಟಾರ್ ವಾಹನ ಮಾಲೀಕರು, ಚಾಲಕರು ಹಾಜರಾಗಿ ಸಲಹೆ ಸೂಚನೆ ನೀಡಲು ಡಿ. ಸಿದ್ದಲಿಂಗೇಶ್ವರ್ ತಿಳಿಸಿದ್ದಾರೆ.
ಮಹಿಳೆಯರ ಶವ ಪತ್ತೆ
ರಾಯಚೂರು: ನಗರದಲ್ಲಿ ಮನೆಯಿಂದ ಕಾಣೆಯಾಗಿದ್ದ ಇಬ್ಬರು ಮಹಿಳೆಯರ ಶವಗಳು ಅನುಮಾನಾಸ್ಪದ ರೀತಿಯಲ್ಲಿ ಬಾವಿಯಲ್ಲಿ ಶುಕ್ರವಾರ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಮೃತರನ್ನು ಮಹೇಶ್ವರಿ(21) ಹಾಗೂ ಈರಮ್ಮ(20) ಎಂದು ಗುರುತಿಸಲಾಗಿದೆ. ಇವರು ಕೆಲ ದಿನಗಳ ಹಿಂದೆ ಮನೆಯಿಂದ ಕಾಣೆಯಾದ ಬಗ್ಗೆ ದೂರು ದಾಖಲಾಗಿತ್ತು. ಆನಂತರ ಶೋಧ ಕಾರ್ಯದಲ್ಲಿದ್ದ ಪೊಲೀಸರಿಗೆ ನಗರದ ಅರಬ್ ಮೊಹಲ್ಲಾದ ಬಾವಿಯೊಂದರಲ್ಲಿ ಇಬ್ಬರ ಶವಗಳು ದೊರೆತಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಸದರ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

