ಸಮರ್ಥನೆ ಸರಿಯಲ್ಲ: ಕೊಲ್ಲಾ ತಿರುಗೇಟು
ಸಿಂಧನೂರು: ತುಂಗಭದ್ರಾ ಎಡದಂಡೆ ನಾಲೆ ವ್ಯಾಪ್ತಿಯಲ್ಲಿ ಬರುವ 54/11 ಆರ್ ವಿತರಣಾ ಕಾಲುವೆ ಆಧುನೀಕರಣ ಕಾಮಗಾರಿ ನಡೆದಿದ್ದು ಗುತ್ತಿಗೆದಾರರು ಮರಂ ಹಾಕುವ ಬದಲಾಗಿ ಸವಳು ಮಣ್ಣು ಹಾಕಿ ಕ್ಯೂರಿಂಗ್ ಮಾಡದೆ ಕಾಮಗಾರಿ ಮಾಡುತ್ತಿರುವುದು ಸರಿಯಲ್ಲ ಎಂದು ಆರೋಪಿಸಿದ್ದಕ್ಕೆ ಶಾಸಕರು ಸಮರ್ಥಿಸಿಕೊಂಡು ಕಳಪೆ ಕಾಮಗಾರಿ ಆಗಿಲ್ಲ ಎಂದು ಪ್ರತಿ ಹೇಳಿಕೆ ನೀಡುವುದು ಅವರ ಘನತೆಗೆ ಶೋಭೆ ತರುವುದಿಲ್ಲ ಎಂದು ಬಿಜೆಪಿ ಮುಖಂಡ ಕೊಲ್ಲಾ ಶೇಷಗಿರಿರಾವ್ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳಪೆ ಕಾಮಗಾರಿ ನಡೆದಿರುವ ಬಗ್ಗೆ ಸ್ವತಃ ಅಧಿಕಾರಿಗಳೇ ಒಪ್ಪಿಕೊಂಡು ಕ್ವಾಲಿಟಿ ಕಂಟ್ರೋಲ್ ಕಂಪನಿ ಮುಖ್ಯಸ್ಥರು ಸಹ ತಕ್ಷಣ 125ನೇ ಚೈನ್ನಲ್ಲಿ 70 ಮೀಟರ್ ಉದ್ದದ ಕಳಪೆ ಕಾಂಕ್ರೀಟ್ ಕಿತ್ತಿ ಬೇರೆ ಕಾಂಕ್ರೀಟ್ ಹಾಕಲು ಒಪ್ಪಿಕೊಂಡಿದ್ದಾರೆ. ಎರಡನೇ ದಿನ ಶಾಸಕ ಬಾದರ್ಲಿ ಅದೇ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಗುಣಮಟ್ಟದಿಂದ ನಡೆಯುತ್ತಿದೆ ಎಂದು ಹೇಳಿಕೆ ಹಾಸ್ಯಾಸ್ಪದ ಎಂದು ಟೀಕಿಸಿದ್ದಾರೆ.
ಅತ್ಯಾಚಾರಕ್ಕೊಳಗಾದ ಬಾಲಕಿ ಕುಟುಂಬಕ್ಕೆ ಸಾಂತ್ವನ
ಲಿಂಗಸ್ಗೂರು: ತಾಲೂಕಿನ ಗೋನವಾಟ್ಲ ತಾಂಡಾದ ಬಾಲಕಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಸುದ್ದಿ ತಿಳಿದ ನೂತನ ಸಂಸದ ಬಿ.ವಿ.ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಭೋಸರಾಜ್ ಸೇರಿದಂತೆ ಹಲವಾರು ಗಣ್ಯರು ಬುಧವಾರ ತಾಂಡಾಕ್ಕೆ ತೆರಳಿ ಬಾಲಕಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಈ ವೇಳೆ ಕೇಂದ್ರದ ಮಾಜಿ ಸಚಿವ ಬಸವರಾಜ ಪಾಟೀಲ್ ಆನ್ವರಿ, ಮಾಜಿ ಸಚಿವರಾದ ರಾಜಾ ಅಮರೇಶ್ವರ ನಾಯಕ, ಅಮರೇಗೌಡ ಪಾಟೀಲ್ ಬಯ್ಯಾಪುರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೂಪನಗೌಡ ಪಾಟೀಲ್, ಮುಖಂಡರಾದ ಗುಂಡಪ್ಪ ನಾಯಕ, ಡಿ.ಎಸ್. ಹೂಲಗೇರಿ ಸೇರಿದಂತೆ ಇನ್ನಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

