ಅರ್ಜಿಗಳ ವಿಲೇವಾರಿಗೆ ಕ್ರಮ
ಸಾಗರ: ಇಲ್ಲಿನ ನೂತನ ಉಪವಿಭಾಗಾಧಿಕಾರಿಯಾಗಿ ಡಾ. ಬಿ. ಉದಯಕುಮಾರ್ ಶೆಟ್ಟಿ ಸೋಮವಾರ ಅಧಿಕಾರ ವಹಿಸಿಕೊಂಡರು.
ಮಂಗಳವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಬಗರ್ ಹುಕುಂ ಅಕ್ರಮ ಸಕ್ರಮ ಸೇರಿದಂತೆ ಕಂದಾಯ ಇಲಾಖೆಯಲ್ಲಿ ವಿಲೇವಾರಿಯಾಗದೆ ಉಳಿದಿರುವ ಎಲ್ಲಾ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರಲ್ಲದೆ ಆಡಳಿತದಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಹೆಚ್ಚು ನಿಗಾ ವಹಿಸಲಾಗುವುದು ಎಂದು ಹೇಳಿದರು.
ಹೆಚ್ಚುವರಿ ಕೌಂಟರ್: ಆಧಾರ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಪ್ರಧಾನ ಅಂಚೆ ಕಚೇರಿಯಲ್ಲಿ ಒಂದೇ ಕೌಂಟರ್ ಇದ್ದು, ಪ್ರತಿದಿನ 30 ರಿಂದ 40 ಜನರಿಗೆ ಮಾತ್ರ ಅರ್ಜಿ ವಿತರಿಸಲಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿರುವ ಕುರಿತು ಕೇಳಲಾದ ಪ್ರಶ್ನೆಗೆ, ಇದು ನನ್ನ ಗಮನಕ್ಕೂ ಬಂದಿದೆ. ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಹೆಚ್ಚುವರಿ ಕೌಂಟರ್ ತೆರೆಯುವ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.
ಪಹಣಿಯಲ್ಲಿ ಬೆಳೆ ದೃಢೀಕರಣ ನಮೂದಿಸದೇ ಇರುವ ಬಗ್ಗೆ ಕ್ರಮ ಜರುಗಿಸುವ ಜೊತೆಗೆ ಜೋಗ ಅಭಿವೃದ್ಧಿ ಪ್ರಾಧಿಕಾರದೊಂದಿಗೆ ಚರ್ಚಿಸಿ, ಪ್ರವಾಸಿಗರಿಗೆ ಅಗತ್ಯ ಸೌಲಭ್ಯ ಕಲ್ಪಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಇದು ಚುನಾವಣೆ ವರ್ಷವಾಗಿರುವುದರಿಂದ ಶಾಂತಿ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸುವತ್ತ ಮೊದಲ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

