ಶಿವಮೊಗ್ಗ

ಇಂದಿನಿಂದ ಮಕ್ಕಳ ಹಬ್ಬ

Published On :

ಶಿವಮೊಗ್ಗ: ಬೆಂಗಳೂರಿನ ರಾಜ್ಯ ಬಾಲವಿಕಾಸ ಅಕಾಡೆಮಿ, ಜಿಲ್ಲಾ ಬಾಲಭವನ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಫೆ.9 ಮತ್ತು 10ರಂದು ನಗರದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಅಂತರ ಜಿಲ್ಲಾ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ ಹಾಗೂ ಮಕ್ಕಳ ಹಬ್ಬ ಹಮ್ಮಿಕೊಂಡಿದೆ.
 ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಲಕ್ಷ್ಮೀಕಾಂತಮ್ಮ, ಮಕ್ಕಳಲ್ಲಿನ ವಿವಿಧ ಪ್ರತಿಭೆ ಅನಾವರಣಗೊಳಿಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಂಡಿದ್ದು, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಕಾರವಾರ ಹಾಗೂ ಉಡುಪಿ, ಪ್ರತಿ ಜಿಲ್ಲೆಗಳಿಂದ ಆಯ್ದ 10-16 ವರ್ಷದ 13 ಮಕ್ಕಳ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಫೆ.9ರಂದು ಸಂಜೆ ಚಿನ್ನಾರಿ ಮುತ್ತ ಸಿನಿಮಾ ಪ್ರದರ್ಶನ ಏರ್ಪಡಿಸಿದೆ ಎಂದವರು ಹೇಳಿದರು. ್ಲ ರಾಜ್ಯ ಬಾಲ ಭವನ ಸಮಿತಿ ಸದಸ್ಯ ಪಿ. ಶಿವಣ್ಣ, ಬಸವರಾಜಪ್ಪ, ಬಾಲ ವಿಕಾಸ ಸಮಿತಿ ಸದಸ್ಯ ತಿಪ್ಪೇಸ್ವಾಮಿ ಮೊದಲಾದವರು ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.