ಬೆಂಕಿ ದುರಂತ: ಲಕ್ಷಾಂತರ ನಷ್ಟ
ಶಿವಮೊಗ್ಗ: ಎರಡು ಪ್ರತ್ಯೇಕ ಬೆಂಕಿ ದುರಂತದಲ್ಲಿ ಒಂದು ಜ್ಯೂಸ್ ಅಂಗಡಿ ಹಾಗೂ ಎರಡು ವಾಹನಗಳಿಗೆ ಬೆಂಕಿ ತಗುಲಿ ಲಕ್ಷಾಂತರ ರುಪಾಯಿ ನಷ್ಟವಾಗಿದೆ.
ಲಕ್ಕಿನಕೊಪ್ಪ ಸಮೀಪದಲ್ಲಿ ಬೈಕ್ ಹಾಗೂ ಜಲ್ಲಿ ಸಾಗಾಣೆ ಮಾಡುವ ಟಿಪ್ಪರ್ ಲಾರಿಯ ನಡುವೆ ನಡೆದ ಡಿಕ್ಕಿಯಿಂದ ಬೆಂಕಿ ಕಾಣಿಸಿಕೊಂಡು ಬೈಕ್ ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ಲಾರಿ ಹಾನಿಗೀಡಾಗಿದೆ.
ಅಪಘಾತ ಸಂದರ್ಭದಲ್ಲಿ ಬೈಕ್ನಿಂದ ಪೆಟ್ರೋಲ್ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ. ಕೂಡಲೇ ಸಾರ್ವಜನಿಕರು ಅಗ್ನಿಶಾಮಕ ದಳದ ಅಧಿಕಾರಿಗಳಿಗೆ ಸುದ್ದಿ ಮುಟ್ಟಿಸಿದ್ದಾರೆ. ಅಗ್ನಿಶಾಮಕ ದಳವು ಸ್ಥಳಕ್ಕಾಗಮಿಸಿ ಹೆಚ್ಚಿನ ಹಾನಿಯನ್ನು ತಪ್ಪಿಸಿತು. ಅಂದಾಜು 3 ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ.
ಶಿವಮೊಗ್ಗ ನಗರದ ಬಾಲರಾಜ ಅರಸ್ ರಸ್ತೆಯಲ್ಲಿರುವ ಪಂಚವಟಿ ಜ್ಯೂಸ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇದರಿಂದ ಅಂಗಡಿಯಲ್ಲಿದ್ದ ಪೀಠೋಪಕರಣ, ಕ್ಯಾಶ್ ಟೇಬಲ್, ಮೀಟರ್ ಬೋರ್ಡ್ ಸೇರಿ ಮತ್ತಿತರ ವಸ್ತುಗಳಿಗೆ ಹಾನಿಯಾಗಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಈ ಅವಘಡ ಸಂಭವಿಸಿರುವ ಶಂಕಿಸಲಾಗಿದೆ. ಘಟನೆಯಲ್ಲಿ ಸುಮಾರು 50 ರಿಂದ 60 ಸಾವಿರ ನಷ್ಟ ಸಂಭವಿಸಿರುವ ಅಂದಾಜು ವ್ಯಕ್ತಪಡಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

