ಮುಷ್ಕರ: ಶಾಲಾ, ಕಾಲೇಜಿಗೆ ಇಂದು ರಜೆ
ಶಿವಮೊಗ್ಗ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕರ ಸಂಘಟನೆಗಳ ಜಂಟಿ ಸಮಿತಿ ದೇಶಾದ್ಯಂತ ಫೆ. 20ರಿಂದ ಎರಡು ದಿನ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ಬುಧವಾರ ರಜೆ ಘೋಷಿಸಲಾಗಿದೆ.
ಈ ವಿಷಯವನ್ನು ತಿಳಿಸಿದ ಜಿಲ್ಲಾಧಿಕಾರಿ ವಿಪುಲ್ ಬನ್ಸಾಲ್ ಅವರು,ಪ್ರತಿಭಟನೆಗೆ ಯಾವುದೇ ಆಕ್ಷೇಪಣೆ ಇಲ್ಲ. ಎಂದಿನಂತೆ ಸಾರಿಗೆ ವ್ಯವಸ್ಥೆ ಇರಲಿದ್ದು, ಯಾವುದೇ ಅಹಿತಕರ ಘಟನೆ ಹಾಗೂ ಸಾರ್ವಜನಿಕರಿಗೆ ತೊಂದರೆ ಮಾಡದಂತೆ ಸಂಘ, ಸಂಸ್ಥೆಗಳಿಗೆ ಸೂಚಿಸಿದ್ದಾರೆ.
ಬೆಂಬಲ: ಈ ನಡುವೆ ಮುಷ್ಕರಕ್ಕೆ ಜಿಲ್ಲೆಯ ಹಲವು ಕಾರ್ಮಿಕ ಸಂಘಟನೆಗಳು ಬೆಂಬಲ ಸೂಚಿಸಿವೆ. ಸಿಐಟಿಯು, ಬಿಎಂಎಸ್, ಎಐಟಿಯುಸಿ, ಎಐಐಇಎ, ಎಐಬಿಇಎ, ಬಿಎಸ್ಎನ್ಎಲ್ಯು, ಅಂಚೆ ಸರ್ಕಾರಿ ನೌಕರರ ಒಕ್ಕೂಟ, ಬಿಇಎಫ್ಐ, ವಿಐಎಸ್ಎಲ್, ಎಂಪಿಎಂ ಕಾರ್ಮಿಕ ಸಂಘಟನೆಗಳು ಮುಷ್ಕರಕ್ಕೆ ಕೈಜೋಡಿಸಿವೆ.
ದೇಶಾದ್ಯಂತ ಕರೆ ನೀಡಿರುವ ಮುಷ್ಕರಕ್ಕೆ ಅಂಚೆ, ಸಾರಿಗೆ ಇಲಾಖೆ ಹಾಗೂ ಬ್ಯಾಂಕ್ ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳುವುದರಿಂದ ಬುಧವಾರ ಮತ್ತು ಗುರುವಾರ ಅಂಚೆ ಇಲಾಖೆಯಲ್ಲಿ ಯಾವುದೇ ನೌಕರ ಕರ್ತವ್ಯ ನಿರ್ವಹಿಸುವುದಿಲ್ಲ. ಆದ್ದರಿಂದ ಸಾರ್ವಜನಿಕರು ಅಂಚೆ ಕಚೇರಿಯಲ್ಲಿ ತಮ್ಮ ಕೆಲಸಗಳಿದ್ದರೆ ಶುಕ್ರವಾರಕ್ಕೆ ವೀಸಲಿಟ್ಟುಕೊಳ್ಳುವುದು ಅನಿವಾರ್ಯ.
ಸಾರಿಗೆ ವ್ಯವಸ್ಥೆ: ಸಾರಿಗೆ ಕುರಿತಂತೆ ಪ್ರಸ್ತುತ ದಿನದ ಪರಿಸ್ಥಿತಿಯನ್ನು ಮನಗಂಡು ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಾರಿಗೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಬ್ಯಾಂಕ್ ಯೂನಿಯನ್ಗಳು ಮುಷ್ಕರದಲ್ಲಿ ಪಾಲ್ಗೊಳ್ಳುವುದರಿಂದ ಫೆ.20, 21ರಂದು ಬ್ಯಾಂಕ್ಗಳು ಕಾರ್ಯನಿರ್ವಹಿಸುವುದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

