ಶಿವಮೊಗ್ಗ

ಸಾಗರದಲ್ಲಿ ನೀರಸ ಪ್ರತಿಕ್ರಿಯೆ

Published On :

ಸಾಗರ: ಕಾರ್ಮಿಕ ಸಂಘಟನೆಗಳು ದೇಶಾದ್ಯಂತ ಕರೆ ನೀಡಿರುವ ಎರಡು ದಿನಗಳ ಭಾರತ್ ಬಂದ್‌ಗೆ ಸಾಗರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
 ಅಂಗಡಿ ಮುಂಗಟ್ಟು ತೆರೆದಿದ್ದು, ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಿದರೂ, ಬ್ಯಾಂಕ್ ಹಾಗೂ ಶಾಲಾಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ದೂರದ ಊರುಗಳಿಗೆ ಕೆ.ಎಸ್.ಆರ್.ಟಿ.ಸಿ. ಹಾಗೂ ಖಾಸಗಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು. ನ್ಯಾಯಾಲಯದಲ್ಲಿ ವಕೀಲರು ಕಲಾಪ ಬಹಿಷ್ಕರಿಸಿ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು.
ಹೆದ್ದಾರಿ ಬಂದ್: ತಾಲೂಕಿನ ಆನಂದಪುರದಲ್ಲಿ ಕಾರ್ಮಿಕರು ರಸ್ತೆ ನಡುವೆ ಟೈರ್ ಸುಟ್ಟು ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ರಾ.ಹೆ. 206ನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ನಂತರ ಪೊಲೀಸರು  ಪ್ರತಿಭಟನಕಾರರನ್ನು ಚದುರಿಸಿ ರಸ್ತೆ ತೆರವುಗೊಳಿಸಿದರು.
  ಇಲ್ಲಿನ ಪ್ರಧಾನ ಅಂಚೆ ಕಚೇರಿಯಲ್ಲಿ ಅಂಚೆ ಇಲಾಖೆ ನೌಕರರ ಒಕ್ಕೂಟದ ವತಿಯಿಂದ ಬುಧವಾರ ಕಾರ್ಮಿಕರ ಸಂಘಟನೆಗಳು ನೀಡಿರುವ ಬಂದ್ ಕರೆಗೆ ಪೂರಕವಾಗಿ ಕಚೇರಿ ಮುಚ್ಚಿ ಪ್ರತಿಭಟನೆ ನಡೆಸಲಾಯಿತು.
ಒಕ್ಕೂಟದ ಸದಸ್ಯರು ಸರ್ಕಾರದ ಬೆಲೆ ಏರಿಕೆ ನೀತಿಯ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ  ಒಕ್ಕೂಟದ ಅಧ್ಯಕ್ಷ ವೆಂಕಟೇಶ್ ಭಟ್, ಪ್ರಮುಖರಾದ ಲಕ್ಷ್ಮೀನಾರಾಯಣ್, ಮಂಜುನಾಥ ಎಂ.ಎನ್., ಪುಂಡಲೀಕ ಕೆ., ಕೆ.ಎಲ್.ಮಂಜಪ್ಪ ಖಂಡಿಕಾ, ಮಾಧುರಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.