ಇಂದು ಜಾಗೃತಿ ಆಂದೋಲನ
ಶಿವಮೊಗ್ಗ: 29ರಂದು ಬೆಳಗ್ಗೆ 11 ಗಂಟೆಗೆ ನಗರದ ಅಂಬೇಡ್ಕರ್ ಭವನದಲ್ಲಿ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ವಿರುದ್ಧ ಜನ ಸಾಮಾನ್ಯರಲ್ಲಿ ಅರಿವು ಮೂಡಿಸಲು ಬೃಹತ್ ಆಂದೋಲನ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ರಾಜಶೇಖರ್ ಎಂ. ಶೆಟ್ಟರ್ ಉದ್ಘಾಟಿಸುವರು. ಜಿಲ್ಲಾಧಿಕಾರಿ ಎಂ.ವಿ. ವೇದಮೂರ್ತಿ ಅಧ್ಯಕ್ಷತೆ ವಹಿಸುವರು. ಜಿಲ್ಲಾ ರಕ್ಷಣಾಧಿಕಾರಿ ಕೌಶಲೇಂದ್ರ ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸಂಜಯ ಬಿಜ್ಜೂರ್ ಮುಖ್ಯ ಅತಿಥಿಯಾಗಿ ಆಗಮಿಸುವರು. ರಾಜ್ಯ ಬಾಲಭವನ ಸೊಸೈಟಿ ನಿರ್ದೇಶಕ ಪಿ. ಶಿವಣ್ಣ ಉಪನ್ಯಾಸ ನೀಡುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಲಕ್ಷ್ಮೀಕಾಂತಮ್ಮ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ಎಸ್. ಕುಮಾರ್ ಉಪಸ್ಥಿತರಿರುವರು.
31ರಂದು ಶೈಕ್ಷಣಿಕ ಕಾರ್ಯಾಗಾರ
ಶಿವಮೊಗ್ಗ: ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಹ ಶಿಕ್ಷಕರ ಸಂಘ ಜಿಲ್ಲಾ ಘಟಕವು ಜ.31ರಂದು ಬೆಳಗ್ಗೆ 10 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾ ಮಟ್ಟದ ಶೈಕ್ಷಣಿಕ ಕಾರ್ಯಾಗಾರ, ಸಮ್ಮೇಳನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಏರ್ಪಡಿಸಲಾಗಿದೆ.
ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿಯವರ ಉಪಸ್ಥಿತಿಯಲ್ಲಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಸಂಸದ ಬಿ.ವೈ. ರಾಘವೇಂದ್ರ ಪ್ರತಿಭಾ ಪುರಸ್ಕಾರ ವಿತರಿಸುವರು. ಸಿದ್ಧಬಸಪ್ಪ ಬಿ. ಅಧ್ಯಕ್ಷತೆ ವಹಿಸುವರು. ಆಯನೂರು ಮಂಜುನಾಥ್, ಜಿಪಂ ಅಧ್ಯಕ್ಷೆ ಗೀತಾ ಮಲ್ಲಿಕಾರ್ಜುನ ಆಗಮಿಸುವರು.
ಇಂದಿನಿಂದ ಜನಸಂಪರ್ಕ ಸಭೆ
ಭದ್ರಾವತಿ: ಮಂಗಳೂರು ವಿದ್ಯುತ್ಚ್ಛಕ್ತಿ ಸರಬರಾಜು ಕಂಪನಿ ನಿಯಮಿತ ಭದ್ರಾವತಿ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಗ್ರಾಹಕರ ಜನಸಂಪರ್ಕ ಸಭೆಗಳನ್ನು ಜ.29ರಿಂದ ಬೆಳಗ್ಗೆ 10ರಿಂದ ಮಧ್ಯಾಹ್ನ 12.30ರ ವರೆಗೆ ನಡೆಸಲಾಗುವುದು.
ಮಂಗಳವಾರ (ಜ.29) ಜೆಪಿಎಸ್ನಲ್ಲಿರುವ ಘಟಕ 1ರ ಕಚೇರಿ, ಹಳೇನಗರ ಭದ್ರಾವತಿ ಘಟಕ-2ರ ಕಚೇರಿ ಬುಧವಾರ (ಜ.30), ಹಾಗೂ ಉಂಬ್ಳೇಬೈಲು ರಸ್ತೆಯಲ್ಲಿರುವ ಘಟಕ-3ರ ಕಚೇರಿಯಲ್ಲಿ ಗುರುವಾರ (ಜ.31) ನಡೆಸಲಾಗುವುದು. ಗ್ರಾಹಕರು ಸಭೆಗೆ ಹಾಜರಾಗಿ ಸಲಹೆ ಸೂಚನೆ ಮುಂಚಿತವಾಗಿ ಲಿಖಿತ ರೂಪದಲ್ಲಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್, ನಗರ ಉಪವಿಭಾಗ, ಭದ್ರಾವತಿ ಇವರಿಗೆ ಸಲ್ಲಿಸಲು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

