ಡಿಸಿಸಿಬಿ ಭವಿಷ್ಯವೇನು?
ಶಿವಮೊಗ್ಗ: ಅವ್ಯವಹಾರ ಬಯಲಾದ ನಂತರ ಡಿಸಿಸಿ ಬ್ಯಾಂಕ್ ಶಾಖೆಗಳಿಂದ ಗ್ರಾಹಕರು ಠೇವಣಿ ಹಿಂತೆಗೆದುಕೊಳ್ಳುತ್ತಲೇ ಇದ್ದಾರೆ. ಮತ್ತೊಂದೆಡೆ ಡಿಸಿಸಿಬಿ ಸಾರಥಿಯೇ ಬಂಧನಕ್ಕೆ ಒಳಗಾಗಿರುವಾಗ ಸಂಸ್ಥೆಯ ಮುಂದಿನ ಭವಿಷ್ಯದ ಬಗ್ಗೆ ಚರ್ಚೆ ಆರಂಭವಾಗಿದೆ.
ಕಾನೂನು ಪಂಡಿತರ ಪ್ರಕಾರ ಅಧ್ಯಕ್ಷರು ಬಂಧನ ಮುಕ್ತರಾಗಿ ಬರುವವರೆಗೆ ಉಪಾಧ್ಯಕ್ಷರು ಪ್ರಮುಖ ತೀರ್ಮಾನ ತೆಗೆದುಕೊಳ್ಳಲು ಅರ್ಹರಾಗಿರುತ್ತಾರೆ. ಹಾಗೆಯೇ, ಹಾಲಿ ಅಧ್ಯಕ್ಷರು ರಾಜಿನಾಮೆ ನೀಡಿದರೆ ನಿರ್ದೇಶಕ ಮಂಡಳಿ ಹೊಸಬರನ್ನು ಆಯ್ಕೆ ಮಾಡಬೇಕಾಗುತ್ತದೆ.
ಸದ್ಯದ ಪರಿಸ್ಥಿತಿಯಲ್ಲಿ ಆಡಳಿತ ಮಂಡಳಿ ಅಧ್ಯಕ್ಷರ ರಾಜಿನಾಮೆ ಕೇಳುವ ಪರಿಸ್ಥಿತಿ ಇಲ್ಲ. ಆದರೆ, ಆಡಳಿತ ಮಂಡಳಿ ಮೇಲೆ ವಿಶ್ವಾಸವಿಲ್ಲದಿದ್ದರೆ ರಾಜ್ಯ ಸರಕಾರ ಮಧ್ಯ ಪ್ರವೇಶಿಸಬಹುದಾಗಿದೆ. ಬ್ಯಾಂಕ್ಗೆ ಆಡಳಿತಾಧಿಕಾರಿ ನೇಮಿಸುವ ಹಕ್ಕು ಕೂಡಾ ಸರಕಾರಕ್ಕಿದೆ. ಜಿಲ್ಲಾಡಳಿತ- ಸಹಕಾರ ಇಲಾಖೆ ಸರ್ಕಾರಕ್ಕೆ ಸೂಕ್ತ ವರದಿ ಸಲ್ಲಿಸಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾರ್ಗದರ್ಶನ ಕೇಳುವ ಸಾಧ್ಯತೆಯೂ ಇದೆ. ಒಟ್ಟಾರೆ ರಾಜಕೀಯ ನಾಯಕರ ಇಚ್ಛಾಶಕ್ತಿ ಮೇಲೆ ಡಿಸಿಸಿಬಿ ಭವಿಷ್ಯ ಅಡಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

