ಶಿವಮೊಗ್ಗ

ಉದ್ಯೋಗಂ ಮನುಷ್ಯ ಲಕ್ಷಣಂ: ಸುಧಾ

Published On :

ತ್ಯಾಗರ್ತಿ: ಉದ್ಯೋಗಂ ಪುರುಷ ಲಕ್ಷಣಂ ಎಂಬ ಗಾದೆ ಉದ್ಯೋಗಂ ಮನುಷ್ಯ ಲಕ್ಷಣಂ ಎಂದು ಬದಲಾವಣೆ ಮಾಡಿಕೊಳ್ಳಬೇಕು. ಏಕೆಂದರೆ ಮಹಿಳೆಯರು ಯಾವ ಕೆಲಸಕ್ಕೂ ಕಡಿಮೆ ಇಲ್ಲದಂತೆ ಸಮಾಜ ಹಾಗೂ ಕುಟುಂಬಕ್ಕೋಸ್ಕರ ದುಡಿಯುತ್ತಿದ್ದಾರೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕೇಂದ್ರದ ಸಮನ್ವಯ ಅಧಿಕಾರಿ ಸುಧಾ ಕರೆ ನೀಡಿದರು.   ಸಾಗರ ತಾಲೂಕು ಹೊಸಂತೆ ಗ್ರಾಮದಲ್ಲಿ ಯೋಜನೆಯ ಜ್ಞಾನ ವಿಕಾಸ ಕೇಂದ್ರವು ಮಹಿಳೆಯರಿಗೆ ಮಹಿಳಾ ಸಬಲೀಕರಣ ಹಾಗೂ ಶಿಕ್ಷಣದ ಮಹತ್ವ ಕುರಿತು ಏರ್ಪಡಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾವಂತ ಯುವಕರು ಮತ್ತು ಯುವತಿಯರು ಕೃಷಿಯ ಬಗ್ಗೆ ಆಸಕ್ತಿ ವಹಿಸಿ ಅಧ್ಯಯನ ಮಾಡಬೇಕು. ಮಹಿಳಾ ಸಬಲೀಕರಣ, ಪ್ರತಿ ಮನೆಗೂ ಮಾಹಿತಿ ತಲುಪಿಸುವುದು, ಜ್ಞಾನ ವಿಕಾಸ ಕೇಂದ್ರದ ಮೂಲ ಉದ್ದೇಶ ಎಂದು ತಿಳಿಸಿದರು.ವಸಂತನೀಚಡಿ ಮಾತನಾಡಿದರು. ವೀಣಾ ಹೊಸಂತೆ ಅಧ್ಯಕ್ಷತೆ ವಹಿಸಿದ್ದರು. ಯೋಜನೆಯ ಹಿರೇಬಿಲಗುಂಜಿ ಘಟಕದ ಸೇವಾನಿರತೆ ಕುಮುದಾ ಇದ್ದರು. ಮೇರಿ ಸ್ವಾಗತಿಸಿದರು. ನೇತ್ರಾವತಿ ನಿರೂಪಿಸಿ, ಲಕ್ಷ್ಮೀಬಾಯಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.