ಶಿವಮೊಗ್ಗ

ಸಾಂಕ್ರಾಮಿಕ ರೋಗ ತಡೆಗೆ ಕಾರ್ಯತಂತ್ರ

Published On :

ಶಿವಮೊಗ್ಗ: ಸಾಂಕ್ರಾಮಿಕ ರೋಗ ಉಲ್ಬಣಗೊಳ್ಳದಂತೆ ತಡೆಯಲು ಜಿಲ್ಲಾಡಳಿತ ಕಾರ್ಯತಂತ್ರ ರೂಪಿಸಿದೆ.
ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಎಲ್ಲಾ ಇಲಾಖೆಗಳು ಮುಂಜಾಗ್ರತಾ ಕ್ರಮ ವಹಿಸಬೇಕೆಂದು ಜಿಲ್ಲಾ ಆರೋಗ್ಯ ರಕ್ಷಣಾ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಸೂಚಿಸಿದ್ದಾರೆ.
ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ರಚಿಸಲಾಗಿರುವ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಘೀ, ಎಚ್1 ಎನ್1, ಮಂಗನಕಾಯಿಲೆ ಹಾಗೂ ಚಿಕೂನ್ ಗುನ್ಯಾ ಸೇರಿದಂತೆ ಇತರ ರೋಗಗಳು ಬೇರೆ ಬೇರೆ ಮಾರ್ಗಗಳಲ್ಲಿ ಹರಡುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಇತರ ಇಲಾಖೆಗಳೂ ಇಂತಹ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕೈಜೋಡಿಸಬೇಕೆಂದು ಅವರು ತಿಳಿಸಿದರು.
ನೀರು ಸಂಗ್ರಹ ಜಾಗಗಳನ್ನು ಕನಿಷ್ಠ ವಾರಕ್ಕೆ ಎರಡು ಬಾರಿ ಶುಚಿಗೊಳಿಸಬೇಕು ಹಾಗೂ ನಗರಸಭೆ, ಸಮಾಜಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ನಿರ್ದಿಷ್ಟವಾಗಿ ಸಾಂಕ್ರಾಮಿಕ ರೋಗ ತಡೆಗೆ ವಿಶೇಷ ಆದ್ಯತೆ ನೀಡಬೇಕು ಎಂದರು.
ನಿರ್ದಿಷ್ಟ ಸಾಂಕ್ರಾಮಿಕ ರೋಗಗಳ ಕುರಿತು ಸಂದೇಹಗಳು ಕಂಡುಬಂದಲ್ಲಿ ತಕ್ಷಣ ಆರೋಗ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಸಿಕಾಂತ್ ಸೆಂಥಿಲ್ ಮಾತನಾಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಲಾರ್ವಾ ಸಮೀಕ್ಷೆ ಹಾಗೂ ಸಾಂಕ್ರಾಮಿಕ ರೋಗ ನಿಯಂತ್ರಣ ಕುರಿತಾಗಿ ವ್ಯಾಪಕ ಪ್ರಚಾರದ ಅಗತ್ಯವಿದೆ ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರಾಜ್ ನಾಯಕ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ತಾಲೂಕು ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.