ಶಿವಮೊಗ್ಗ

ಪಾಂಡುರಂಗ ನಿಧನ

Published On :

ಹೊಸನಗರ: ತಾಲೂಕಿನ ನಗರ ಅರಣ್ಯ ವಲಯ ಕಚೇರಿಯ ಲಿಪಿಕ ಸಹಾಯಕ ಪಾಂಡುರಂಗ (51) ಬುಧವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. ಬೆಳಿಗ್ಗೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ನಗರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನೋವು ಉಲ್ಬಣಗೊಂಡ ಹಿನ್ನಲೆಯಲ್ಲಿ ತೀರ್ಥಹಳ್ಳಿಗೆ ಕೊಂಡು ಹೋಗಲಾಯಿತಾದರು ಪ್ರಯೋಜನವಾಗದೆ ಮಾರ್ಗಮಧ್ಯದಲ್ಲಿ ಸಾವನಪ್ಪಿದ್ದಾರೆ. ನಗರ ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಕಳೆದ 25 ವರ್ಷದಿಂದ ದಿನಗೂಲಿ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದ ಅವರಿಗೆ ಪತ್ನಿ, ಒಬ್ಬ ಪುತ್ರ ಹಾಗೂ ಪುತ್ರಿ ಇದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.