ಶಿವಮೊಗ್ಗ

ಸೂಪರ್‌ಸೀಡ್‌ಗೆ ಒತ್ತಾಯ ಸಲ್ಲ

Published On :

ಶಿವಮೊಗ್ಗ: ಡಿಸಿಸಿಬಿ ನಗರ ಶಾಖೆಯಲ್ಲಿ ನಡೆದ ಹಗರಣ ಮುಂದಿಟ್ಟುಕೊಂಡು ಬ್ಯಾಂಕ್ ಸೂಪರ್ ಸೀಡ್ ಮಾಡುವಂತೆ ಕೆಲ ರಾಜಕಾರಣಿಗಳು ಒತ್ತಾಯಿಸುತ್ತಿರುವುದು ಸರಿ ಅಲ್ಲ ಎಂದು ಸಹ್ಯಾದ್ರಿ ಮಹಿಳಾ ಪಟ್ಟಣ ಸಹಕಾರ ಬ್ಯಾಂಕ್ ಅಧ್ಯಕ್ಷೆ ವೀರಮ್ಮ ಹೇಳಿದ್ದಾರೆ.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 20 ವರ್ಷಗಳ ಹಿಂದೆ ಸೂಪರ್ ಸೀಡ್ ಆಗಿದ್ದ ಬ್ಯಾಂಕನ್ನು ಬೆಳೆಸಲು ಆರ್.ಎಂ. ಮಂಜುನಾಥಗೌಡರು ಹಗಲಿರುಳು ಶ್ರಮಿಸಿದ್ದಾರೆ. ಸ್ವಸಹಾಯ ಗುಂಪುಗಳಿಗೆ ಹಣಕಾಸು ನೆರವು ನೀಡುವ ಮೂಲಕ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಿದ್ದಾರೆ. ಆದರೆ ಬ್ಯಾಂಕಿನ ಕೆಲವು ಸಿಬ್ಬಂದಿಗಳು ಮಾಡಿದ ತಪ್ಪಿಗೆ ಇಡೀ ಬ್ಯಾಂಕನ್ನೇ ಹೊಣೆ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ಮಾಡಿದರೆ ಸಹಕಾರ ಸಂಘಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ರಾಜಕೀಯ ಹಗೆತನದಿಂದ ಸಹಕಾರ ವ್ಯವಸ್ಥೆ ಹಾಳುಮಾಡುವುದು ಸರಿ ಅಲ್ಲ ಎಂದರು. ಉಪಾಧ್ಯಕ್ಷೆ ವನಜಾಕ್ಷಿ, ಬಸವೇಶ್ವರ ಪಟ್ಟಣ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷೆ ಶಾಂತಾ ಆನಂದ್, ಯಶೋದ ಮಂಜುನಾಥ್, ಮಂಜುಳಾ ಬಾಯಿ, ಪುಷ್ಪ, ತಬಸ್ಸುಂ, ಆರ್ಯಾಂಭ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.