ಪರಿಸರ ಸಂರಕ್ಷಣೆ ಮಾಹಿತಿ ಕಾರ್ಯಾಗಾರ
ಶೃಂಗೇರಿ: ಹೆಚ್ಚಿನ ಜನಸಂಖ್ಯೆ, ಮಾನವನ ದುರಾಸೆಯಿಂದ ಪರಿಸರ ನಾಶವಾಗುತ್ತಿದೆ ಎಂದು ಶೃಂಗೇರಿ ಉಪವಲಯಾರಣ್ಯಾಧಿಕಾರಿ ಶಫಿ ಅಹಮದ್ ಹೇಳಿದರು. ಅವರು ಪಟ್ಟಣದ ಹನುಮಂತನಗರದ ಅಂಬೇಡ್ಕರ್ ಭವನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಪರಿಸರ ಸಂರಕ್ಷಣೆ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದರು. ಇತ್ತೀಚಿನ
ದಿನಗಳಲ್ಲಿ ಅರಣ್ಯ ನಾಶ ಹೆಚ್ಚುತ್ತಿದೆ. ಸ್ವಾಭಾವಿಕ ಅರಣ್ಯಗಳನ್ನು ರಕ್ಷಿಸಬೇಕಿದೆ. ಅರಣ್ಯಕ್ಕೆ ಬೆಂಕಿ ಬಿದ್ದಂತಹ ಸನ್ನಿವೇಶದಲ್ಲಿ ಕೂಡಲೇ ಇಲಾಖೆಯ ಗಮನಕ್ಕೆ ತರಬೇಕು. ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದು ತಿಳಿಸಿದರು. ಉದಯ್, ಹಾಲಮ್ಮ, ಶಾಖಿರಾಬಿ, ತಂಗಮ್ಮ, ಶಾರದಾ ಮತ್ತಿತರರು ಉಪಸ್ಥಿತರಿದ್ದರು.
ಗ್ರಾಪಂ ಗ್ರಾಮ ಸಭೆ
ಚಿಕ್ಕಮಗಳೂರು: ತಾಲೂಕಿನ ಶಿರವಾಸೆಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಸಭೆ ಜೂ. 24 ರಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಲಜಾ ಅವರ ಅಧ್ಯಕ್ಷತೆಯಲ್ಲಿ ಶಿರವಾಸೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ. ಯೋಜನೆ ಅನುಷ್ಠಾನ ಕುರಿತು, ವಿವಿಧ ಯೋಜನೆಯಲ್ಲಿ ವೈಯಕ್ತಿಕ ಸೌಲಭ್ಯದ ಬಗ್ಗೆ, ವಿವಿಧ ಇಲಾಖಾಧಿಕಾರಿಗಳ ಮಾಹಿತಿಗಳನ್ನು ಚರ್ಚಿಸಲಾಗುವುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

