ಸಕಾರಾತ್ಮಕ ಚಿಂತನೆ ಅವಶ್ಯ: ಇಬ್ರಾಹಿಂ
ಭದ್ರಾವತಿ: ಸಮಾಜದಲ್ಲಿ ಸಕಾರಾತ್ಮಕ ಚಿಂತನೆ ಕಡಿಮೆಯಾಗಿ, ಮೌಲ್ಯಗಳು ನಶಿಸುತ್ತಿವೆ. ರಾಜಕೀಯ ಕಲುಷಿತವಾಗುತ್ತಿದ್ದು, ಇದನ್ನು ಸರಿಪಡಿಸಲು ಎಚ್ಚೆತ್ತುಕೊಳ್ಳಬೇಕೆಂದು ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದರು.
ಪಟ್ಟಣದ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಸಂಜೆ ಕಾರ್ಮಿಕ ಮುಖಂಡ ಡಿ.ಸಿ. ಮಾಯಣ್ಣನವರ 80ನೇ ವರ್ಷದ ಜನ್ಮದಿನಾಚರಣೆ ಸಮಿತಿ ಏರ್ಪಡಿಸಿದ್ದ ಅಭಿನಂದನಾ ಮತ್ತು ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಕಾರ್ಮಿಕ ಮುಖಂಡ ಡಿ.ಸಿ. ಮಾಯಣ್ಣ, ತಂತ್ರಜ್ಞಾನ ಬೆಳವಣಿಗೆ ಪರಿಸರ ಸಂರಕ್ಷಣೆಗೆ ಪೂರಕವಾಗಿಲ್ಲ ಎಂದರು. ಮಾಯಣ್ಣ ಅವರೊಂದಿಗೆ ಅವರ ಧರ್ಮಪತ್ನಿಯನ್ನು ಸನ್ಮಾನಿಸಲಾಯಿತು. ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆಯ ಕಾರ್ಯಾಧ್ಯಕ್ಷ ಕೆ.ಟಿ. ಗಂಗಾಧರ್, ಎಐಟಿಯುಸಿ ರಾಜ್ಯಾಧ್ಯಕ್ಷ ಎಚ್.ಕೆ. ರಾಮಚಂದ್ರಪ್ಪ, ಪ್ರಧಾನ ಕಾರ್ಯದರ್ಶಿ ಎಚ್.ವಿ. ಅನಂತಸುಬ್ಬರಾಯ, ವಿಐಎಸ್ಎಲ್ ಕಾರ್ಮಿಕ ಸಂಘದ ಅಧ್ಯಕ್ಷ ಜೆ.ಎನ್. ಚಂದ್ರಹಾಸ, ಮೈಸೂರು ಕಾಗದ ಕಾರ್ಖಾನೆಯ ಉದ್ಯೋಗಿಗಳ ಸಂಘದ ಅಧ್ಯಕ್ಷ ಎಸ್. ಚಂದ್ರಶೇಖರ್ ಇತರರು ಇದ್ದರು. ಹೋರಾಟಗಾರ ಮತ್ತು ಕಾರ್ಮಿಕ ಮುಖಂಡ ಬಸಪ್ಪ ಅಧ್ಯಕ್ಷತೆ ವಹಿಸಿದ್ದರು. ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಂ. ಶ್ರೀನಿವಾಸನ್ ಪ್ರಾಸ್ತಾವಿಕ ಭಾಷಣ ಮಾಡಿದರು. ಬಿ.ಎನ್. ರಾಜು ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

