ಶಿವಮೊಗ್ಗ

ಬಾದಾಮಿಯಲ್ಲಿ ರೈತ ಸಮಾವೇಶ 30ರಂದು

Published On :

ಹೊನ್ನಾಳಿ:  ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕು ರೈತ ಸಂಘದ ನೇತೃತ್ವದಲ್ಲಿ ಜೂ.30 ರಂದು ಬೆಳಗ್ಗೆ 11 ಗಂಟೆಗೆ ರಾಜ್ಯಮಟ್ಟದ ರೈತರ ಬೃಹತ್ ಸಮಾವೇಶ ಏರ್ಪಡಿಸಲಾಗಿದೆ ಎಂದು ರೈತ ಸಂಘದ ಹೊನ್ನಾಳಿ ತಾಲೂಕು ಘಟಕದ ಅಧ್ಯಕ್ಷ ಎಚ್.ನಾಗರಾಜ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬಾದಾಮಿಯ ಪಿಎಲ್ಡಿ ಬ್ಯಾಂಕ್ ಆವರಣದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಬಾದಾಮಿ ನವಗ್ರಹ ಹಿರೇಮಠದ ಶ್ರೀಶಿವಪೂಜಾ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸುವರು. ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಎಲ್. ಲಕ್ಷ್ಮಿನಾರಾಯಣಗೌಡ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕಿರುತೆರೆ ನಟ ಹಾಗೂ ರೈತ ಸಂಘದ ರಾಜ್ಯ ಸಂಚಾಲಕ ಸಂತೋಷರಾಜ ಬಿ.ಜಾವರೆ  ಭಾಗವಹಿಸಲಿದ್ದಾರೆ. ಹೊನ್ನಾಳಿ ತಾಲೂಕಿನ ರೈತರು 29 ರಂದು ರೈಲಿನ ಪ್ರಯಾಣಕ್ಕೆ ಹರಿಹರ ಅಥವಾ ದಾವಣಗೆರೆ ರೇಲ್ವೆ ನಿಲ್ದಾಣಕ್ಕೆ ಅಗಮಿಸಬೇಕು. ಮಾಹಿತಿಗೆ ಮೊ.9483561164ಗೆ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬೇಕು ಎಂದರು. ವಾಸನದ ಓಂಕಾರಪ್ಪ, ಎಂ.ಬಸವರಾಜಪ್ಪ, ಕೆ.ಸಿ.ಬಸವರಾಜಪ್ಪ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.