ಶಿವಮೊಗ್ಗ

ಕೆರೆಗೆ ಉರುಳಿದ ಸ್ಕಾರ್ಪಿಯೋ

Published On :

ಶಿವಮೊಗ್ಗ: ಎದುರಿಗೆ ಬಂದ ಬೈಕ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಸ್ಕಾರ್ಪಿಯೋ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕೆರೆಗೆ ಉರುಳಿದ ಘಟನೆ ಶುಕ್ರವಾರ ಮುಂಜಾನೆ ಪುರಲೆ ಗ್ರಾಮದಲ್ಲಿ ನಡೆದಿದೆ. ಅಚ್ಚರಿ ಸಂಗತಿ ಎಂದರೆ ಕಾರಿನೊಳಗಿದ್ದ ಎಲ್ಲಾ ಪ್ರಯಾಣಿಕರು ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ.
ಕೆರೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ನೀರಿರಲಿಲ್ಲ. ಹೀಗಾಗಿ ಹೆಚ್ಚಿನ ಅಪಾಯ ಸಂಭವಿಸುವ ಮುನ್ನವೇ ಕಾರಿನೊಳಗಿದ್ದವರು ಸುರಕ್ಷಿತವಾಗಿ ಹೊರಬರುವಲ್ಲಿ ಸಫಲರಾದರು.
ಕಾರಿನೊಳಗೆ ಬಾಣಂತಿ, ಒಂದೂವರೆ ತಿಂಗಳ ಹಸುಗೂಸು ಸೇರಿದಂತೆ ಒಂದೇ ಕುಟುಂಬದ ಏಳು ಜನರು ಇದ್ದರು. ವಿಷಯ ತಿಳಿಯುತ್ತಿದ್ದಂತೆ ಗ್ರಾಮಾಂತರ ಪೊಲೀಸ್ ಠಾಣೆ ಸಬ್‌ಇನ್ಸ್‌ಪೆಕ್ಟರ್ ಉಮೇಶ್ ಮತ್ತವರ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೆರೆಯಲ್ಲಿ ಬಿದ್ದಿದ್ದ ಕಾರನ್ನು ಕ್ರೈನ್ ಮೂಲಕ ಹೊರ ತೆಗೆಯಲಾಯಿತು.
ಚಿತ್ರದುರ್ಗ ಜಿಲ್ಲೆ ಜೆಡಿಎಸ್ ಮುಖಂಡ ಮಲ್ಲೇಶ ನಾಯ್ಕ ತಮ್ಮ ಕುಟುಂಬದ ಇತರೆ ಸದಸ್ಯರೊಂದಿಗೆ ಸ್ಕಾರ್ಪಿಯೋ ಕಾರಿನಲ್ಲಿ ಶಿವಮೊಗ್ಗ ಮೂಲಕ ಎನ್‌ಆರ್‌ಪುರಕ್ಕೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಮಲ್ಲೇಶ್ ನಾಯ್ಕ ಅವರೇ ಕಾರು ಚಾಲನೆ ಮಾಡುತ್ತಿದ್ದರು. ಪುರಲೆ ಕೆರೆ ತಿರುವಿನಲ್ಲಿ ಬರುತ್ತಿದ್ದಾಗ ಎದುರಿನಿಂದ ಬೈಕ್ ಸವಾರನೊಬ್ಬ ಏಕಾಏಕಿ ನುಗ್ಗಿ ಬಂದಿದ್ದು, ಬೈಕ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕೆರೆಗೆ ನುಗ್ಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.