ಕಾಂಗ್ರೆಸ್ ಸೇರ್ಪಡೆ
ಪಾವಗಡ: ತಾಲೂಕು ಜೆಡಿಎಸ್ ಮುಖಂಡ ಗುಮ್ಮಘಟ್ಟ ಬಸವರಾಜ್ ಹಾಗೂ ಇವರ ಅನೇಕ ಮಂದಿ ಬೆಂಬಲಿಗ ಮುಖಂಡರು, ಕಾರ್ಯಕರ್ತರು, ತಾಲೂಕು ಗ್ರಾಮಾಂತರ ಅಧ್ಯಕ್ಷ ಎಚ್.ವಿ. ವೆಂಕಟೇಶ್, ಮುಖಂಡ ಸುದೇಶ್ ಬಾಬು ಸಮ್ಮುಖದಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾದರು.ಗುಮ್ಮಘಟ್ಟ ಗ್ರಾಮದಲ್ಲಿ ಏರ್ಪಡಿಸಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ಗೆ ಸೇರ್ಪಡೆಯಾದ ಬವರಾಜ್ ಹಾಗೂ ಬೆಂಬಲಿಗರು ತಾಲೂಕು ಕಾಂಗ್ರೆಸ್ ಗೆಲವಿಗೆ ಬದ್ಧರಾಗುವುದಾಗಿ ತಿಳಿಸಿದರು.
ನಂತರ ಸುದ್ದಿಗಾರರನ್ನು ಭೇಟಿ ಮಾಡಿ ಮಾತನಾಡಿದ ಮುಖಂಡ ಬವರಾಜ್ ಅವರು, ಜೆಡಿಎಸ್ನಲ್ಲಿ ಆನೇಕ ವರ್ಷಗಳಿಂದ ಸೇವೆ ಮಾಡಿ ಕಳೆದ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶಕ್ತಿಮೀರಿ ಹೋರಾಟ ಮಾಡಿರುವುದಾಗಿ ಹೇಳಿದರು.
ಅಭಿವೃದ್ಧಿಯಲ್ಲಿ ಹಿನ್ನಡೆ ಹಾಗೂ ಪಕ್ಷದಲ್ಲಿ ನಡೆಯುತ್ತಿರುವ ಕೆಲವು ಬೆಳವಣಿಗೆಗಳ ಕಾರಣಗಳಿಂದ ಜೆಡಿಎಸ್ ತೊರೆದಿರುವುದಾಗಿ ತಿಳಿಸಿದ್ದಾರೆ. ತಾರತಮ್ಯ ಮಾಡದೆ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಾರೆ ಎಂದರು.
ಯುವ ಮುಖಂಡ ಈಶ್ವರ್ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

