ಐಷಾರಾಮಿ ಜೀವನ ವಿದ್ಯೆಯ ಗುರಿಯಾಗದಿರಲಿ
ಶಿರಾ: ವಿದ್ಯಾವಂತ ಜನತ್ತಿನೆಲ್ಲೆಡೆ ಜೀವಿಸಬಲ್ಲ. ವಿಜ್ಞಾನ ಕ್ಷೇತ್ರದಲ್ಲಿನ ಸಾಧನೆಯಿಂದ ತಂತ್ರಜ್ಞಾನದಲ್ಲಿ ಮುಂದುವರಿದ ಬೇರೆ ಬೇರೆ ದೇಶದವರು ಭಾರತೀಯ ವಿಜ್ಞಾನಿಗಳ ಸಲಹೆ ಪಡೆಯುತ್ತಿರುವುದು ದೇಶದ ಹಿರಿಮೆ ಎಂದು ಶ್ರೀ ನಂಜಾವಧೂತ ಮಹಾಸ್ವಾಮಿಗಳು ತಿಳಿಸಿದರು.
ಶ್ರೀಕ್ಷೇತ್ರ ಪಟ್ಟನಾಯಕನಹಳ್ಳಿ ಜಾತ್ರೋತ್ಸವ ಪ್ರಯುಕ್ತ ಏರ್ಪಡಿಸಿದ್ದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ವೇದಿಕೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ತಾಲೂಕಿನ ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರ ಹಾಗೂ ಪ್ರೌಢಶಾಲೆಗಳ ವಿಜ್ಞಾನ ವಸ್ತು ಪ್ರದರ್ಶನ ಮತ್ತು ವಿಜ್ಞಾನಿಗಳೊಂದಿಗೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಐಷಾರಾಮಿ ಜೀವನ ವಿದ್ಯೆಯ ಗುರಿಯಾಗಬಾರದು. ಸಾಮಾಜಿಕ ಸ್ವಾಸ್ಥ್ಯ ಹೆಚ್ಚಿಸುವ ನಿಟ್ಟಿನಲ್ಲಿ ಶಿಕ್ಷಕರು ಬೋಧಿಸಬೇಕು. ಮಾನವೀಯತೆಯಿಂದ ಕೂಡಿದ ಶಿಕ್ಷಣ ನೀಡುವಂತಾಗಬೇಕುಎಂದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಾಜಿ ಸಚಿವ ಬಿ.ಸತ್ಯನಾರಾಯಣ ಮಾತನಾಡಿದರು.
ಭಾರತೀಯ ವಿಜ್ಞಾನ ಸಂಸ್ಥೆಯ ಪ್ರೊ. ಜೆ.ಜಗದೀಶ್, ಬಾಹ್ಯಾಕಾಶ ಸಂಸ್ಥೆಯ ವಿಜ್ಞಾನಿಗಳಾದ ಪ್ರೊ. ಸಿ.ಡಿ. ಪ್ರಸಾದ್, ಪ್ರೊ. ಗುರುರಾವ್, ಪ್ರೊ. ಗೋಪಾಲ ಹೆಗ್ಗಡೆ ಮಾತನಾಡಿ, ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು.
ವಿದ್ಯಾರ್ಥಿಗಳಿಂದ ಪ್ರಶ್ನೆ: ವಿಜ್ಞಾನ ವಸ್ತು ಪ್ರದರ್ಶನ ಮತ್ತು ವಿಜ್ಞಾನಿಗಳೊಂದಿಗೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಹಲವು ಪ್ರಶ್ನೆಗಳು ಎದುರಾದವು. ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯೊಬ್ಬರು ಓದುವಾಗ ಬರೆಯುವಾಗ ಮನಸ್ಸಿನ ಚಂಚಲತೆ ಕಡಿಮೆ ಮಾಡಲು ಏನು ಮಾಡಬೇಕು ಎಂಬ ಪ್ರಶ್ನೆಗೆ ಪ್ರೊ. ಗೋಪಾಲ ಹೆಗ್ಗಡೆ ಉತ್ತರಿಸಿದರು.
ಜಿಪಂ ಸದಸ್ಯ ಅರೆಹಳ್ಳಿ ರಮೇಶ್, ಮನೋರೋಗ ತಜ್ಞ ಪುಷ್ಪರಾಜ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೆಶಕ ಟಿ.ಎಸ್. ಅಂಜಿನಪ್ಪ, ಪ್ರೊ. ವೋಡೇ ಪಿ.ಕೃಷ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ರಾಜಕುಮಾರ್, ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಪುಟ್ಟರಾಜು, ತಾಲೂಕು ಘಟಕದ ಅಧ್ಯಕ್ಷ ಹಿಮಂತರಾಜು, ಉಪ ಪ್ರಾಚಾರ್ಯ ಎನ್.ಈಶ್ವರಯ್ಯ, ವಿವಿಧ ಶಾಲೆಗಳು ಶಿಕ್ಷಕರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

