ತುಮಕೂರು

ಮಡಿವಾಳ ಸಮುದಾಯ ಸಂಘಟನೆಯಾಗಲಿ: ತಿಮ್ಮಯ್ಯ

Published On :

ತುಮಕೂರು:  ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಅತಿ ಹಿಂದುಳಿದ ಮಡಿವಾಳ ಸಮುದಾಯ ಜಾಗೃತವಾಗಬೇಕಾದರೆ ಸಂಘಟನೆ ಮುಖ್ಯ. ಈ ಹಿನ್ನೆಲೆಯಲ್ಲಿ ಜನಾಂಗದ ನೌಕರರು ಸಂಘಟಿತರಾಗಬೇಕೆಂದು ಜಿಲ್ಲಾ ಮಡಿವಾಳ ನೌಕರರ ಸಮಾಜ ಸೇವಾ ಸಂಘದ ನೂತನ ಕಾರ್ಯಾಧ್ಯಕ್ಷ ಬಿ.ಕೆ. ತಿಮ್ಮಯ್ಯ ತಿಳಿಸಿದರು.
ನಗರದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಡಿವಾಳ ನೌಕರರ ಸಮಾಜ ಸೇವಾ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಮುದಾಯ ಅಭಿವೃದ್ಧಿ  ಸಾಧಿಸಬೇಕಾದರೆ ಶಿಕ್ಷಣ ಅತಿ ಮುಖ್ಯವಾಗಿದೆ. ಈಗಾಗಲೇ ಜಿಲ್ಲಾ ಸಂಘದ ವತಿಯಿಂದ ಬಾಲಕ ವಿದ್ಯಾರ್ಥಿ ನಿಲಯ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ  ವಿದ್ಯಾರ್ಥಿನಿಯರು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಲು ಬಾಲಕಿಯರ ವಿದ್ಯಾರ್ಥಿ ನಿಲಯ ಸ್ಥಾಪಿಸುವುದೂ ಸೇರಿದಂತೆ ಸಮಾಜದ ಅಭ್ಯುದಯಕ್ಕೆ ನೌಕರರ ಸೇವಾ ಸಂಘ ಪ್ರಗತಿದಾಯಕವಾಗಿ ಕೆಲಸ ಮಾಡಲಿದೆ ಎಂದರು.
ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಜಿಲ್ಲಾ ಮಡಿವಾಳ ನೌಕರರ ಸಮಾಜ ಸೇವಾ ಸಂಘದ ನೂತನ ಅಧ್ಯಕ್ಷ ಎಚ್.ಹನುಮಂತಯ್ಯ ಮಾತನಾಡಿ, ಬಹಳ ವರ್ಷಗಳಿಂದಲೂ ಜನಾಂಗದ ನೌಕರರ ಸಂಘ ಸ್ಥಾಪಿಸಬೇಕೆಂದು ಉದ್ದೇಶಿಸಲಾಗಿತ್ತು. ಅದಕ್ಕೆ ಕಾಲ ಕೂಡಿಬಂದಿರಲಿಲ್ಲ. ಇಂದು ಅದರ ಅವಕಾಶ ಒದಗಿ ಬಂದಿದೆ. ನನಗೆ ಈ ಗುರುತರ ಜವಾಬ್ದಾರಿ ಹೊರಿಸಿದ್ದು, ಪ್ರಾಮಾಣಿಕವಾಗಿ ಸಮುದಾಯದ ಬೆಳವಣಿಗೆಗೆ ಶ್ರಮಿಸುವುದಾಗಿ ತಿಳಿಸಿದರು.
ಯಾವುದೇ ಜನಾಂಗ ಅಭಿವೃದ್ಧಿ ಸಾಧಿಸಬೇಕಾದರೆ ಸಂಘಟನೆ ಅತಿ ಮುಖ್ಯ. ಎಲ್ಲರೂ ಒಗ್ಗಟ್ಟಿನಿಂದ ಮುನ್ನಡೆದರೆ ಸಾಧನೆ ಮಾಡಬಹುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಂ. ತಿಮ್ಮಯ್ಯ ಮಾತನಾಡಿ ಜಿಲ್ಲಾ ಮಡಿವಾಳ ನೌಕರರ ಸಮಾಜ ಸೇವಾ ಸಂಘದ ಸ್ಥಾಪನೆ ಉದ್ದೇಶದ ಬಗ್ಗೆ ತಿಳಿಸಿ ಎಲ್ಲಾ ಜನಾಂಗಗಳಲ್ಲೂ ಈ ರೀತಿಯ ಸಂಘಗಳಿದ್ದು, ಜನಾಂಗದ ಅಭಿವೃದ್ಧಿಗೆ ಶ್ರಮಿಸುತ್ತಿವೆ. ನಾವೂ ಕೂಡ ಜನಾಂಗದ ಅಭಿವೃದ್ಧಿಗಾಗಿ ಕೆಲಸ ಮಾಡುವುದಾಗಿ ಹೇಳಿದರು.
ಸಂಘದ ಗೌರವಾಧ್ಯಕ್ಷ ಗೂಗೂಟಯ್ಯ ಮಾತನಾಡಿ, ಒಂದು ಉತ್ತಮವಾದ ಕೆಲಸ ಮಾಡುವಾಗ ಎಲ್ಲರ ಒಮ್ಮತದ ಪ್ರೋತ್ಸಾಹ ಅಗತ್ಯ. ಮುಂದಿನ ದಿನಗಳಲ್ಲಿ ಉತ್ತಮವಾದ ಸಮಾಜ ಸೇವಾ ಕಾರ್ಯವನ್ನು ಸಂಘದ ವತಿಯಿಂದ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಸಂಘದ ಪದಾಧಿಕಾರಿಗಳಾದ ಆನಂದಮೂರ್ತಿ, ಸಿದ್ಧಗಂಗಯ್ಯ, ಪುರುಷೋತ್ತಮ್, ಶಂಕರಲಿಂಗಯ್ಯ, ಎನ್.ಅಶ್ವತ್ಥ್, ಜಿ.ಬಿ. ಹನುಮಂತರಾಯಪ್ಪ ಸೇರಿದಂತೆ ವಿವಿಧ ತಾಲೂಕುಗಳಿಂದ ಕಾರ್ಯಕಾರಿ ಸಮಿತಿ ಸದಸ್ಯರು ಭಾಗವಹಿಸಿ ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.