ತುಮಕೂರು

ಅಕ್ರಮ ಮರಳು ಸಾಗಣೆ: 3 ಲಾರಿ ವಶ

Published On :

ಕೊರಟಗೆರೆ: ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 3 ಲಾರಿಗಳನ್ನು ತಹಶೀಲ್ದಾರ್ ಏಕೇಶ್ ಬಾಬು ನೇತೃತ್ವದಲ್ಲಿ ವಶಪಡಿಸಿಕೊಂಡಿದ್ದಾರೆ. ತಾಲೂಕಿನ ಕೋಳಾಲ ಹಾಗೂ ಕಸಬಾ ಹೋಬಳಿಗಳ ಮುಖಾಂತರ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 2 ಲಾರಿ 1 ಟಿಪ್ಪರ್ ಅನ್ನು ತಹಶೀಲ್ದಾರ್ ವಶಪಡಿಸಿಕೊಂಡಿದ್ದಾರೆ. ಕೋಳಾಲ ಹೋಬಳಿಯ ಬೈರಗೊಂಡ್ಲು ಗ್ರಾಮದ ಬಳಿ ಅಕ್ರಮವಾಗಿ ದಾಸ್ತಾನು ಮಾಡಿದ್ದ 2 ಲಾರಿಗಳಷ್ಟು ಮರಳನ್ನು ಜಪ್ತಿಮಾಡಿದ್ದು ಮರಳಿನ ವಾರಸುದಾರರು ಇಲ್ಲದ ಕಾರಣ ಜಮೀನಿನ ಮಾಲಿಕರಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದರು. ತಾಲೂಕಿನಲ್ಲಿ ಅಕ್ರಮ ಮರಳು ಸಾಗಾಣೆ ಹೆಚ್ಚಾಗಿ ಕಂಡು ಬರುತ್ತಿದ್ದು ಸ್ಥಳೀಯರ ಮತ್ತು ಸಾರ್ವಜನಿಕರ ಸಹಕಾರದ ಕೊರತೆಯಿಂದ ತಾಲೂಕಿನಲ್ಲಿ ಆಕ್ರಮ ಮರಳು ದಂದೆಗೆ ಕಡಿವಾಣ ಹಾಕಲು ಕಷ್ಟಕರವಾಗುತ್ತಿದೆ ಎಂದು ಅಭಿಪ್ರಾಯಪಟ್ಟರು. ತಹಸೀಲ್ದಾರ್‌ರೊಂದಿಗೆ ಕಂದಾಯ ಅಧಿಕಾರಿಗಳಾದ ಗುರುಪ್ರಸಾದ್, ನರಸಿಂಹ ಮೂರ್ತಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.