ಎನ್ನೆಸ್ಸೆಸ್ ಶಿಬಿರದಿಂದ ಸಮಾಜಸೇವೆ ಅರಿವು: ಶಾಸಕ ಸಿ.ಬಿ.ಸುರೇಶ್‌ಬಾಬು
ಹುಳಿಯಾರು: ಮಹಾತ್ಮ ಗಾಂಧೀಜಿ ಅವರ ಕನಸಿನ ಕೂಸಾಗಿದ್ದ ರಾಷ್ಟ್ರೀಯ ಸೇವಾ ಯೋಜನೆಯು ನಮ್ಮಲ್ಲಿ ನಾನು, ನನ್ನದು ಎಂಬ ಸ್ವಾರ್ಥ ಭಾವನೆ ತೊಡೆದು ಹಾಕಿ ಸಮಾನತೆ, ಸಮಾಜಸೇವೆ ಬಿಂಬಿಸುವಲ್ಲಿ ಎನ್‌ಎಸ್‌ಎಸ್ ಶಿಬಿರ ಸಹಕಾರಿಯಾಗಿದೆ ಎಂದು ಎಂದು ಶಾಸಕ ಸಿ.ಬಿ. ಸುರೇಶ್‌ಬಾಬು ತಿಳಿಸಿದರು.
ಹುಳಿಯಾರು ಹೋಬಳಿ ತಿರುಮಲಾಪುರ ಗ್ರಾಮದಲ್ಲಿ ಹುಳಿಯಾರು-ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಹಮ್ಮಿಕೊಂಡಿದ್ದ 2012-13ನೇ ಸಾಲಿನ ಎನ್.ಎಸ್.ಎಸ್. ಶಿಬಿರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಎನ್.ಎಸ್.ಎಸ್. ಶಿಬಿರದ ಘಟಕಗಳನ್ನು ರಚಿಸಿ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಯೊಂದು ಗ್ರಾಮಗಳಿಗೆ ತೆರಳಿ ಅಲ್ಲಿನ ಸಮಾಜದ ಜನರೊಂದಿಗೆ ಬೆರತು ಅವರಿಗೆ ನಮ್ಮ ಸುತ್ತಮುತ್ತಲಿನ ವಾತಾವರಣ ಯಾವ ರೀತಿ ಸ್ವಚ್ಛವಾಗಿಟ್ಟು ಕೊಳ್ಳಬೇಕು ಎಂಬುದನ್ನು ಮನವರಿಕೆ ಮಾಡಿಕೊಡುತ್ತಾರೆ. ಅವರಿಗೆ ಗ್ರಾಮದ ಜನರು ಸಹಕಾರ ಕೊಟ್ಟು ತಮ್ಮಲ್ಲಿ ಅವರೊಬ್ಬರು ಎಂದು ತಿಳಿಯಬೇಕು ಎಂದರು.
ಶಿಬಿರದಲ್ಲಿ ಪ್ರಾಚಾರ್ಯ ಎಂ.ಎನ್. ನಾಗರಾಜು ಅಧ್ಯಕ್ಷತೆ ವಹಿಸಿದ್ದು, ಸಿ.ಡಿ.ಸಿ ಉಪಾಧ್ಯಕ್ಷ ನಂದಿಹಳ್ಳಿ ಶಿವಣ್ಣ, ಜಿ.ಪಂ. ಸದಸ್ಯೆ ಮಂಜುಳಾ, ಹುಳಿಯಾರು ಗ್ರಾ.ಪಂ. ಅಧ್ಯಕ್ಷೆ ಪುಟ್ಟಮ್ಮ, ತಾ.ಪಂ. ಮಾಜಿ ಉಪಾಧ್ಯಕ್ಷೆ ಬೀಬಿ ಫಾತೀಮಾ, ಗ್ರಾ.ಪಂ. ಅಧ್ಯಕ್ಷೆ ರಾಜಮ್ಮ, ಜಲಾಲ್ ಸಾಬ್, ಪತ್ರಕರ್ತ ರಮೇಶ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ಕಾರ್ಯಕ್ರಮಾಧಿಕಾರಿ ಎಂ.ಶಂಕರಲಿಂಗಯ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಬಿರಾಧಿಕಾರಿಗಳಾಗಿ ಸೈಯ್ಯದ್ ಇಬ್ರಾಹಿಂ ಸಾಬ್, ಜಯಪ್ರಕಾಶ್, ಅಶ್ವತ್ಥನಾರಾಯಣ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

