'ದಿನಪತ್ರಿಕೆ ಓದಿದರೆ ಜ್ಞಾನಾರ್ಜನೆ ಸಾಧ್ಯ'
ತಿಪಟೂರು: ಪತ್ರಿಕೋದ್ಯಮ ವಿದ್ಯಾರ್ಥಿಗಳು ಸೇವಾ ಮನೋಭಾವನೆ ಹೊಂದಿ, ಅನ್ಯಾಯಗಳ ವಿರುದ್ಧ ಹೋರಾಡಿ ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಪ್ರಾಂಶುಪಾಲ ಡಾ.ಜಯದೇವಪ್ಪ ಕರೆ ನೀಡಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗಾಗಿ ಪ್ರಾಯೋಗಿಕ ಉಪನ್ಯಾಸ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪ್ರತಿದಿನ ತಪ್ಪದೆ ದಿನಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಂಡು ಬೌದ್ಧಿಕ ಮಟ್ಟ ಹೆಚ್ಚಿಸಿಕೊಂಡು ತಾವೇ ಸ್ವತಃ ವರದಿ, ಲೇಖನ, ಕಥೆ-ಕವನ ಬರೆಯುವ ಮೂಲಕ ಸಮಾಜವನ್ನು ತಿದ್ದುವ ಕೆಲಸ ಪತ್ರಿಕೋದ್ಯಮ ವಿದ್ಯಾರ್ಥಿಗಳದ್ದಾಗಿದೆ ಎಂದರು.
ಮಾಧ್ಯಮಗಳಲ್ಲಿ ಕ್ರೀಯಾಶೀಲತೆಯಿಂದ ಕೆಲಸ ನಿರ್ವಹಿಸಲು ಪತ್ರಿಕೋದ್ಯಮ ಉಪಯುಕ್ತವಾಗಿದೆ. ವಿದ್ಯಾರ್ಥಿಗಳು ಓದುವ ಕಡೆ ಹೆಚ್ಚು ಗಮನವಿಟ್ಟಾಗ ಮಾತ್ರ ಮುಂದೆ ಜೀವನದಲ್ಲಿ ಸ್ವಾವಲಂಬಿಗಳಾಗಿ ಬದುಕಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ರಾಜ್ಯಶಾಸ್ತ್ರ ಉಪನ್ಯಾಸಕ ಡಾ. ಹೊನ್ನಾಂಜನಯ್ಯ, ಪತ್ರಿಕೋದ್ಯಮ ಉಪನ್ಯಾಸಕ ಪುಟ್ಟರಾಜು ಮಾತನಾಡಿದರು. ಕಾರ್ಯಾಗಾರಕ್ಕೆ ತಪ್ಪದೆ ಭಾಗವಹಿಸಿ ಇದರ ಪ್ರಯೋಜನ ಪಡೆದುಕೊಳ್ಳಬೇಕು. ಕಲ್ಪತರು ನಾಡು ಎಂಬ ನಿಯತಕಾಲಿಕೆಯನ್ನು ಹೊರತರಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಕನ್ನಡ ಉಪನ್ಯಾಸಕರಾದ ಡಾ. ವೆಂಕಟೇಶ್, ಯೋಗೀಶ್ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪತ್ರಿಕೋದ್ಯಮ ವಿದ್ಯಾರ್ಥಿಗಳಾದ ಹೇಮಾವತಿ ಪ್ರಾರ್ಥಿಸಿ, ಎಂ.ಎಸ್. ನಂದಿನಿ ಸ್ವಾಗತಿಸಿ, ಮಹೇಶ್ ನಿರೂಪಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

