ಯುವ ಶಕ್ತಿಯಿಂದ ಮಾತ್ರ ಬದಲಾವಣೆ ಸಾಧ್ಯ: ನಾಡಗೌಡ
ಕ.ಪ್ರ. ವಾರ್ತೆ ್ಣ ಹುಳಿಯಾರು ್ಣ ಮಾ.29
ಇಂದಿನ ರಾಜಕೀಯ ಪಕ್ಷಗಳಲ್ಲಿನ ಹಿರಿಯ ಹಾಗೂ ಮೇಧಾವಿ ನಾಯಕರು ಸತ್ವಯುತ ಆಡಳಿತ ನೀಡುವಲ್ಲಿ ವಿಫಲವಾಗಿದ್ದು, ರೈತರು, ಜನಸಾಮಾನ್ಯರ ನೋವುಗಳಿಗೆ ಸ್ಪಂದಿಸದೆ ಆಡಳಿತ ನಡೆಸುತ್ತಿರುವ ನಿಟ್ಟಿನಲ್ಲಿ ರಾಜಕೀಯದಲ್ಲಿ ಹೊಸ ಬದಲಾವಣೆ ಆಗಬೇಕಿದ್ದು, ಅದು ಇಂದಿನ ಯುವ ಶಕ್ತಿಯಿಂದ ಮಾತ್ರ ಸಾಧ್ಯವಿದ್ದು, ಯುವಪೀಳಿಗೆಯವರಿಗೆ ಹೆಚ್ಚಿನ ಅದ್ಯತೆ ನೀಡುವುದಾಗಿ ಜೆಡಿಯು ರಾಜ್ಯಾಧ್ಯಕ್ಷ ಎಂ.ಪಿ.ನಾಡಗೌಡ ತಿಳಿಸಿದರು.
ಹುಳಿಯಾರಿನ ವಿಜಯನಗರ ಬಡಾವಣೆಯಲ್ಲಿ ಪ್ರಾರಂಭಗೊಂಡ ಜೆಡಿಯು ಉದ್ಘಾಟನಾ ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮುಖಂಡರ ಭ್ರಷ್ಟಾಚಾರ, ಜನವಿರೋಧಿ ನೀತಿಗಳಿಂದಾಗಿ ಜನ ಬೇಸತ್ತಿರುವ ಮತದಾರರು ಈ ಬಾರಿಯ ವಿಧನಾಸಭೆ ಚುನಾವಣೆಗಳಲ್ಲಿ ಎಚ್ಚರಿಕೆಯಿಂದ ಮತದಾನ ಮಾಡುವ ಮೂಲಕ ಯಾರಿಂದ ರಾಜ್ಯದ ಅಭಿವೃದ್ಧಿ ಸಾಧ್ಯ ಎಂಬುದನ್ನು ಅರಿತು ಅಂತಹ ಪಕ್ಷಕ್ಕೆ ಆಡಳಿತ ಚುಕ್ಕಾಣಿ ಹಿಡಿಯಲು ಅವಕಾಶ ಕಲ್ಪಿಸುವಂತೆ ಮನವಿ ಮಾಡಿದರು.
ಜೆಡಿಯು ರಾಜ್ಯದಲ್ಲಿ 224 ಕ್ಷೇತ್ರಗಳಲ್ಲಿಯೂ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಗುರಿ ಹೊಂದಿದ್ದು, ಬತ್ತಳಿಕೆಯಲ್ಲಿ ಪ್ರಸ್ತುತ 100 ರಿಂದ 120 ಅಭ್ಯರ್ಥಿಗಳು ಸಿದ್ದರಿದ್ದು, ಉಳಿದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಈ ಬಾರಿಯ ಚುನಾವಣೆಯಲ್ಲಿ ಜೆಡಿಯು ಗಮನಾರ್ಹ ಸಾಧನೆ ಮಾಡಲಿದೆ ಎಂದರು.ಡಾ.ಪ್ರಿಯಾ ಮಾತನಾಡಿದರು. ಸಾಗರ ಕ್ಷೇತ್ರದ ಮಾಜಿ ಶಾಸಕ ಧರ್ಮಪ್ಪ, ಜಿಲ್ಲಾಧ್ಯಕ್ಷ ಕೆ.ಜಿ.ಎಲ್.ರವಿ,ಚಿ.ನಾ.ಹಳ್ಳಿ ಕ್ಷೇತ್ರದ ಅಭ್ಯರ್ಥಿ ಪ್ರಕಾಶ್‌ಯಾದವ್, ಜಿ.ಕೆ.ಸಿ.ರೆಡ್ಡಿ, ಲೋಕಪಾಲ್, ಕುಮಾರಸ್ವಾಮಿ,ಶಿವಶಂಕರ್ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

