'ಮೊಸಳೆ ಕಣ್ಣೀರು ಸುರಿಸುವವರಿಗೆ ತಕ್ಕಪಾಠ'
ಶಿರಾ: ಶಾಸಕನಾಗಿ ಆಯ್ಕೆಯಾಗಿ ನಿಮ್ಮ ಋಣ ತೀರಿಸಲು ಇದು ನನ್ನ ಕೊನೆ ಚುನಾವಣೆಯಾಗಿದ್ದು ನನಗೆ ಮತ ನೀಡಬೇಕೆಂದು ಜನರ ಬಳಿ ಮೊಸಳೆ ಕಣ್ಣೀರು ಹಾಕುವವರನ್ನು ಜನರು ತಿರಸ್ಕರಿಸಲಿದ್ದಾರೆ ಎಂದು ಪರೋಕ್ಷವಾಗಿ ಮಾಜಿ ಸಚಿವ ಬಿ.ಸತ್ಯನಾರಾಯಣ ಅವರ ಹೆಸರು ಪ್ರಸ್ತಾಪಿಸದೆ ಎ ಪಿಎಂಸಿ ಅಧ್ಯಕ್ಷ ಶಶಿಧರ ಗೌಡ ಟೀಕಿಸಿದರು.
ಅವರು ಪಟ್ಟಣದಲ್ಲಿ ನಡೆದ ಕಸಬಾ ಹೋಬಳಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಈ ಹಿಂದೆ ಜನರು ಅವರಿಗೆ ಕೊಟ್ಟ ಅವಕಾಶವನ್ನು ಸರಿಯಾಗಿ ಸದುಪಯೋಗಪಡಿಸಿಕೊಳ್ಳದೆ ಈಗ ಜನರ ಬಳಿ ಮೊಸಳೆ ಕಣ್ಣೀರು ಹಾಕುವ ರಾಜಕಾರಣಿಯ ನಿಜ ರೂಪವನ್ನು ಕಾರ್ಯಕರ್ತರು ಜನರ ಬಳಿ ತೆರಳಿ ತಿಳಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ ಎಂದರು.
ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂಗಾವರ ಮಾರಣ್ಣ ಮಾತನಾಡಿ. ಮಾ.31 ಕ್ಕೆ ಬರಗೂರಿನಲ್ಲಿ ಏ.4 ಕ್ಕೆ ಯರಗುಂಟೆ ಗೇಟ್ ಹಾಗೂ ಏ.6 ಕ್ಕೆ ಭೂತಪ್ಪನಗುಡಿ ಹತ್ತಿರ ಹೋಬಳಿ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು.
ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಲ್ಲಾಬಕಾಷ್, ಕೆಪಿಸಿಸಿ ಸದಸ್ಯ ಸತ್ಯನಾರಾಯಣ, ಮುಖಂಡರಾದ ಎಸ್.ಎನ್.ಕೃಷ್ಣಯ್ಯ, ಎನ್.ಸಿ.ದೊಡ್ಡಯ್ಯ, ಯುವ ಕಾಂಗ್ರೆಸ್ ಅಧ್ಯಕ್ಷ ಉದಯಶಂಕರ್, ಗುಳಿಗೇನಹಳ್ಳಿ ನಾಗರಾಜು, ನಗರಸಭಾ ಸದಸ್ಯರಾದ ರಾಜಣ್ಣ, ನೂರೂಲ್ಲಾಖಾನ್ ಮತ್ತಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

