'ಯುವಕರು ಸಮಾಜ ಸೇವಾ ಮನೋಭಾವ ಬೆಳೆಸಿಕೊಳ್ಳಿ'
ಕ.ಪ್ರ. ವಾರ್ತೆ ್ಣ ಗುಬ್ಬಿ ್ಣ ಮಾ.29
ರಾಷ್ಟೀಯ ಸೇವಾ ಯೋಜನೆಯ ಪ್ರತಿಜ್ಞೆಗಳಿಗೆ ಗೌರವ ನೀಡಿ ಅವುಗಳನ್ನು ಅನುಸರಿಸಿದಾಗ ಮಾತ್ರ ಅಂತಹ ಕಾರ್ಯಕ್ರಮಗಳು ಸಾರ್ಥಕತೆ ಕಾಣುತ್ತವೆ ಎಂದು ನಿವೃತ್ತ ಪ್ರಾಂಶುಪಾಲ ಪ್ರೊ..ಎಂ.ಜಿ.ರಾಮಯ್ಯ ತಿಳಿಸಿದರು.
ಗುಬ್ಬಿ ತಾಲೂಕಿನ ತ್ಯಾಗಟೂರಿನಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರವ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ನಡೆಯುವ ದುಷ್ಕೃತ್ಯ ತಡೆಯಲು ಉತ್ತಮ ಸಮಾಜವನ್ನು ನಿರ್ಮಾಣ ಮಾಡಲು ಇಂದಿನ ಯುವಜನತೆ ಪಣ ತೊಟ್ಟು ನಿಲ್ಲಬೇಕು ಎಂದರು. ಪ್ರೊ.ಹೆಚ್.ಕುಸುಮ ಮಾತನಾಡಿ, ಸರ್ಕಾರ ಶಿಕ್ಷಣಕ್ಕಾಗಿ ನೀಡುತ್ತಿರುವ ಅನುದಾನದಿಂದ ಮಕ್ಕಳಿಗೆ ಪೂರ್ಣ ಪ್ರಮಾಣದಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಸಾಧ್ಯವಾಗುತ್ತಿಲ್ಲವಾದ್ದರಿಂದ ಜನಸಾನ್ಯರು ಶಿಕ್ಷಣ ಸಂಸ್ಧೆಗಳಿಗೆ ದಾನ ದತ್ತಿಗಳನ್ನು ನೀಡುವ ಪ್ರವೃತ್ತಿ ಬೆಳೆಸಿಕೊಳ್ಳಬೇಕಾಗಿದೆ ಎಂದರು. ಗ್ರಾಪಂ ಸದಸ್ಯ ಚಂದ್ರಣ್ಣ ಮಾತನಾಡಿದರು. ವಿ.ಎಸ್. ಎನ್. ಅಧ್ಯಕ್ಷ ಕಿಡಿಗಣ್ಣಪ್ಪ, ಹಾಲು ಉತ್ಪಾದಕ ಸಂಘದ ಅಧ್ಯಕ್ಷ ಚನ್ನಬಸವಯ್ಯ,ಎಸ್.ಡಿ.ಎಂ. ಸಿ.ಅಧ್ಯಕ್ಷ ರೇಣುಕಯ್ಯ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

