ತುಮಕೂರು

ವಿವಾಹಿತ ಮಹಿಳೆ ನೇಣಿಗೆ ಶರಣು

Published On :

ಪಾವಗಡ: ವಿವಾಹಿತ ಮಹಿಳೆಯೊಬ್ಬರು ನೇಣು ಬಿದಿದುಕೊಂಡು ಮೃತಪಟ್ಟಿರುವ ಘಟನೆ ತಾಲೂಕಿನ ಚಿತ್ತಗಾನಹಳ್ಳಿ ಹೊರವಲಯದಲ್ಲಿ ಶುಕ್ರವಾರ ನಡೆದಿದೆ.
ಲತಾ (28) ಮೃತಪಟ್ಟ ವಿವಾಹಿತ ಮಹಿಳೆ. ಚಿತ್ತಗಾನಹಳ್ಳಿಯ ಸಿದ್ಧಪ್ಪ ಎಂಬುವರ ಪುತ್ರಿ ಲತಾ ಎಂಬುವರಿಗೆ 2ತಿಂಗಳ ಹಿಂದೆ ತುಮಕೂರಿನ ಶಿಕ್ಷಕ ನಾಗರಾಜು ಎಂಬುವರೊಂದಿಗೆ ಮದುವೆ ಆಗಿದ್ದು, ತವರಿನಲ್ಲೇ ವಾಸಿಸುತ್ತಿದ್ದರು ಎನ್ನಲಾಗಿದೆ. ರಾಜಿ ಪಂಚಾಯಿತಿ ನಡೆಸಿ ಗಂಡನ ಮನೆಗೆ ಕಳುಹಿಸಿದರೂ ಗುರುವಾರ ವಾಪಸ್ ಬಂದ ಲತಾ ತಮ್ಮ ಜಮೀನಿನಲ್ಲಿರುವ ಹುಣಿಸೇ ಮರಕ್ಕೆ ನೇಣುಬಿಗಿದುಕೊಂಡು ಆತ್ಯಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಕೊಲೆ
ಪಾವಗಡ: ಕ್ಷುಲ್ಲಕ ಕಾರಣಕ್ಕಾಗಿ ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ತಾಲೂಕಿನ ಬೂದಿಬೆಟ್ಟ ಗ್ರಾಮದಲ್ಲಿ ನಡೆದಿದೆ. ಮಾರುತಿ(40) ಮೃತ ವ್ಯಕ್ತಿ. ಇವರು ಕಳೆದ ಗುರುವಾರ ರಾತ್ರಿ ಬಸ್ ನಿಲ್ದಾಣದ ಕಟ್ಟೆಯೊಂದರ ಮೇಲೆ ಊಟ ಮಾಡುತ್ತಿದ್ದ ಸಂದರ್ಭದಲ್ಲಿ ಮೋಟಾರ್ ರಿವೈಂಡಿಂಗ್ ಮಾಲೀಕ ನರಸಿಂಹಮೂರ್ತಿ ಎಂಬುವರು ರಾಡಿನಿಂದ ಹೊಡೆದಿದ್ದಾರೆ. ತೀವ್ರ ಪೆಟ್ಟು ಬಿದ್ದ ಪರಿಣಾಮ ಮಾರುತಿ ಸ್ಥಳದಲ್ಲಿಯೆ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿ ಆರೋಪಿ ನರಸಿಂಹಮೂರ್ತಿಯನ್ನು ಬಂಧಿಸಿದ್ದು ಸ್ಥಳಕ್ಕೆ ಮಧುಗಿರಿ ಡಿವೈಎಸ್ಪಿ ಗುರುಸ್ವಾಮಿ, ತಿರುಮಣಿ ಸಿಪಿಐ ಶೇಷಾದ್ರಿ ಆಗಮಿಸಿ ಪರೀಶಿಲಿಸಿದ್ದಾರೆ. ತಾಲೂಕಿನ ವೈ.ಎನ್. ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತದೇಹ ಪತ್ತೆ
ಕುಣಿಗಲ್: ಪಟ್ಟಣದ ಗ್ರಾಮದೇವತೆ ದೇಗುಲದ ಸಮೀಪವಿದ್ದ ಪಾಳು ಬಿದ್ದ ಅಂಗಡಿ ಆವರಣದಲ್ಲಿ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾಗಿದೆ.
ಮೃತರನ್ನು ರವಿಕುಮಾರ್(43) ಎಂದು ಗುರುತಿಸಲಾಗಿದೆ. ಈತ ತಾಲೂಕಿನ ಹಾಲುವಾಗಿಲು ಗ್ರಾಮದವನಾಗಿದ್ದು, ಪಟ್ಟಣದ ಸಿಮೆಂಟ್ ಅಂಗಡಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದ. ಮದ್ಯವ್ಯಸನಿಯಾಗಿದ್ದ ಈತನಿಗೆ ಹೆಂಡತಿ, ಮಕ್ಕಳು ದೂರಾವಾಗಿದ್ದರು ಎನ್ನಲಾಗಿದೆ. ಕುಡಿದ ಅಮಲಿನಲ್ಲಿ ಈತನ ತಲೆ ಕಲ್ಲಿಗೆ ಬಡಿದು ರಕ್ತ ಸ್ರಾವವಾಗಿ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸಂಬಂಧಿಕ ಚಂದ್ರು ಎಂಬುವರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.