ಉಚಿತ ತರಬೇತಿ
ತುಮಕೂರು: ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಐಎಎಸ್, ಕೆಎಎಸ್ ಹಾಗೂ ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವವರಿಗೆ 2004-15 ನೇ ಸಾಲಿನಲ್ಲಿ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಬಿಸಿಎಂ ಅಧಿಕಾರಿ ತಿಳಿಸಿದ್ದಾರೆ. ಜಿಲ್ಲೆಯ ಪ್ರವರ್ಗ-1, 2ಎ, 3ಎ ಹಾಗೂ 3ಬಿಗೆ ಸೇರಿದ ಅಭ್ಯರ್ಥಿಗಳು ಜು.23 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9480818013,9480818010 ಸಂಪರ್ಕಿಸಬಹುದು.
ಸಾಲಕ್ಕೆ ಅರ್ಜಿ ಆಹ್ವಾನ
ತುಮಕೂರು: ಜಿಲ್ಲೆಯ ತುರುವೇಕೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಉದ್ಯೋಗಿನಿ ಯೋಜನೆಯಡಿ ಸಾಲ ಸೌಲಭ್ಯ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮಹಿಳೆಯರು ಜು.14 ರೊಳಗೆ ತುರುವೇಕೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಬಹುದು.
ಲೋಕಾ ಬಲೆಗೆ ಗ್ರಾಮಲೆಕ್ಕಿಗ
ತುಮಕೂರು: ಗ್ರಾಮಾಂತರ ತಾಲೂಕಿನ ಹೆಬ್ಬೂರು ಹೋಬಳಿ ಕುಡುವನಕುಂಟೆ ಗ್ರಾಮದ ಜಮೀನಿನ ಖಾತಾ ಬದಲಾವಣೆಗೆ ಸಂಬಂಧಿಸಿದಂತೆ 1000 ಲಂಚ ಸ್ವೀಕರಿಸುತ್ತಿರುವಾಗ ಬಿಸಿಲೇಹಳ್ಳಿ ವೃತ್ತದ ಗ್ರಾಮಲೆಕ್ಕಿಗ ಎಂ.ಸಿ. ಮಲ್ಲಿಕಾರ್ಜುನಯ್ಯ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಈ ಕುರಿತು ಗಂಗ ಹನುಮಂತಯ್ಯ ದೂರು ನೀಡಿದ್ದರು. ಲೋಕಾಯುಕ್ತ ಪೋಲಿಸ್ ಅಧೀಕ್ಷಕ ಎನ್. ರಮೇಶ್ಚಂದ್ರ ಅವರ ಮಾರ್ಗದರ್ಶನದಲ್ಲಿ ಕೈಗೊಂಡಿದ್ದ ಈ ಕಾರ್ಯಾಚರಣೆಯಲ್ಲಿ ಪೋಲಿಸ್ ನಿರೀಕ್ಷಕ ಎಂ.ಪಿ. ಗಂಗಲಿಂಗಯ್ಯ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.
ಸಹಾಯಕಿ ಹುದ್ದೆಗೆ ಆಹ್ವಾನ
ತುಮಕೂರು: ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ 7 ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರ ಹುದ್ದೆಯನ್ನು ಗೌರವಧನ ಆಧಾರದ ಮೇಲೆ ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ತುಮಕೂರು ಗ್ರಾಮಾಂತರ ವ್ಯಾಪ್ತಿಯಲ್ಲಿರುವ ಬಾಣಾವರ, ಮಾವುಕೆರೆ, ದೊಡ್ಡಸಾರಂಗಿಪಾಳ್ಯ, ದೊಡ್ಡತಿಮ್ಮನಪಾಳ್ಯ, ಚಿಕ್ಕತೊಟ್ಲುಕೆರೆ, ಮಲ್ಲೇನಹಳ್ಳಿ, ಹೆಬ್ಬೂರು ಗ್ರಾಮಗಳಲ್ಲಿ ಈ ಹುದ್ದೆಗಳು ಖಾಲಿಯಿದ್ದು, ಆಸಕ್ತರು ಜು.31ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಕ್ಕೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ, ಬಿ.ಎಚ್.ರಸ್ತೆ, ಇಂಡಸ್ಟ್ರಿಯಲ್ ಏರಿಯಾ, ತುಮಕೂರು ಗ್ರಾಮಾಂತರ ಇಲ್ಲಿ ಸಂಪರ್ಕಿಸಬಹುದು.
ಯಂತ್ರಗಳ ವಿತರಣೆ
ತುಮಕೂರು: ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಿಂದ ವಿವಿಧ ಸಾಮರ್ಥ್ಯದ ಮೇವು ಕತ್ತರಿಸುವ ಯಂತ್ರಗಳನ್ನು ಉಚಿತವಾಗಿ ವಿತರಿಸಲು ಉದ್ದೇಶಿಸಿದ್ದು, ಆಸಕ್ತ ಪಶುಪಾಲಕರು ಅರ್ಜಿ ಸಲ್ಲಿಸಬಹುದು ಎಂದು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಅರ್ಜಿ ಸಲ್ಲಿಸುವವರ ಬಳಿ ಜಾನುವಾರು ಹಸು, ಎಮ್ಮೆ, ಎತ್ತು, ಮೇಕೆ, ಕುರಿ ಈ ಪ್ರಾಣಿಗಳಲ್ಲಿ ಯಾವುದಾದರೂ ಇರಬೇಕು. ಹಾಗೂ ಜಮೀನಿನಲ್ಲಿ ಮೇವು ಬೆಳೆಯನ್ನು ಬೆಳೆಯುತ್ತಿರಬೇಕು ಅಥವಾ ಮೇವು ಸಂಗ್ರಹಿಸುವ ಸಾಮರ್ಥ್ಯ ಇರಬೇಕು. ಅರ್ಜಿದಾರರು ಪ.ಜಾತಿ, ಪಂಗಡದವರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ಲಗತ್ತಿಸಬೇಕು. ಆಸಕ್ತರು ತಮ್ಮ ಅರ್ಜಿಯೊಂದಿಗೆ ಫಲಾನುಭವಿ ತಾನು ಹೊಂದಿರುವ ಜಾನುವಾರು ಸಂಖ್ಯೆ ಬಗ್ಗೆ ಪಶುವೈದ್ಯಾಧಿಕಾರಿಗಳಿಂದ ಪಡೆದ ಧೃಡೀಕರಣ ಪತ್ರ ಲಗತ್ತಿಸಿರಬೇಕು. 3 ಎಚ್.ಪಿ. ಸಾಮರ್ಥ್ಯದ ಮೇವು ಕತ್ತರಿಸುವ ಯಂತ್ರಕ್ಕೆ ಬೇಡಿಕೆ ಸಲ್ಲಿಸುವವರು 5 ಟನ್ ಸಾಮರ್ಥ್ಯದ ಸಿಮೆಂಟ್ನಿಂದ ನಿರ್ಮಿತ ಒಂದು ರಸಮೇವು ಗುಂಡಿಯನ್ನು ನಿರ್ಮಿಸುವ ಬಗ್ಗೆ ಒಪ್ಪಿಗೆ ಪತ್ರ ಲಗತ್ತಿಸಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಜು. 14 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಪಶು ವೈದ್ಯ ಇಲಾಖೆಯ ಸಹಾಯಕ ನಿರ್ದೇಶಕರು ಅಥವಾ ಸ್ಥಳೀಯ ಪಶುವೈದ್ಯಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

