ಆದರ್ಶದಿಂದ ನಾಯಕತ್ವ
ಕನ್ನಡಪ್ರಭ ವಾರ್ತೆ ತುಮಕೂರು ಜು.11
ಯುವ ಜನತೆ ಉತ್ತಮ ಆದರ್ಶ ಗುಣಗಳನ್ನು ಬೆಳೆಸಿಕೊಂಡಾಗ ಮಾತ್ರ ಸಮಾಜದಲ್ಲಿ ಒಳ್ಳೆಯ ನಾಯಕರಾಗಿ ಬೆಳೆಯಲು ಸಾಧ್ಯವಾಗುತ್ತದೆ ಎಂದು ಕೇಂದ್ರ ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರದ ಸಮನ್ವಯಾಧಿಕಾರಿ ಎ. ದೋನಿ ಅಂದಪ್ಪ ಹೇಳಿದ್ದಾರೆ.
ಶಿರಾ ನಗರದ ಶ್ರೀ ರಂಗನಾಥ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೇಂದ್ರ ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ ತುಮಕೂರು, ಜಲಧಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಯುವ ಮುಂದಾಳತ್ವ ಹಾಗೂ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಯುವ ಜನತೆಯನ್ನು ಕುರಿತು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಸಮಾಜವು ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗಿದೆ. ಆದ್ದರಿಂದ ಯುವ ಜನತೆ ಸಮಾಜವನ್ನು ಉನ್ನತ ಮಟ್ಟದೆಡೆಗೆ ಕೊಂಡೊಯ್ಯಬೇಕಾದರೆ ನಾಯಕತ್ವದ ಗುಣಗಳನ್ನು ಅಳವಡಿಸಿಕೊಳ್ಳಬೇಕಾಗುತ್ತದೆ ಎಂದರು.
ತಿದ್ದುವ ಕೆಲಸ: ಯುವ ಜನತೆ ಅನೇಕ ರೀತಿಯಲ್ಲಿ ತಪ್ಪು ದಾರಿಗಿಳಿಯುತ್ತಿದ್ದಾರೆ. ತಪ್ಪುದಾರಿಗಿಳಿಯುತ್ತಿರುವ ಜನತೆಯನ್ನು ಯುವ ವಿದ್ಯಾರ್ಥಿಗಳು ತಿದ್ದುವ ಕೆಲಸ ಮಾಡಿದಾಗ ಮುಂದೆ ಹಾಗುವ ಸಮಸ್ಯೆಗಳನ್ನು ತಡೆಯಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಸಂಪನ್ಮೂಲ ವ್ಯಕ್ತಿಗಳಾದ ಸದಾನಂದ ಡಿ. ಮಾತನಾಡಿ, ಪ್ರತಿಯೊಬ್ಬರು ತಮ್ಮಲ್ಲಿ ಜೀವನ ಕೌಶಲ್ಯಗಳನ್ನು ಒಳಗೊಂಡಿರಬೇಕಾಗುತ್ತದೆ. ಇಲ್ಲವಾದರೆ ಅವರು ಸಮಾಜದಲ್ಲಿ ಬೆಳೆಯಲು ಸಾಧ್ಯವಾಗುವುದಿಲ್ಲ. ಹೆಚ್ಚಿನದಾಗಿ ಇಂದಿನ ವಿದ್ಯಾರ್ಥಿಗಳು ಶಿಸ್ತು, ಸಮಯ, ಕಾಳಜಿ, ಆಸಕ್ತಿ ಮುಂತಾದವಗಳನ್ನು ಪಾಲಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಸಂಪನ್ಮೂಲ ವ್ಯಕ್ತಿಗಳಿಂದ ಪಡೆದಂತಹ ಮಾರ್ಗದರ್ಶನವನ್ನು ತಮ್ಮ ಸುತ್ತಲಿನ ಅಕ್ಕ-ಪಕ್ಕದವರಿಗೆ ತಿಳಿಸುತ್ತಾ ಹೋದಾಗ ಒಂದು ಉತ್ತಮ ಸಮಾಜವನ್ನು ನಿರ್ಮಾಣ ಮಾಡಿದಂತಾಗುತ್ತದೆ ಎಂದರು.
ಭವಿಷ್ಯಕ್ಕೆ ದಾರಿ: ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಜೊತೆಗೆ ಸಮಾಜವನ್ನು ಉಳಿಸುವ ಪ್ರಯತ್ನ ಮಾಡಬೇಕಿದೆ. ತಮ್ಮ ಸುತ್ತಮುತ್ತಲಿನ ಪರಿಸರದ ಬಗ್ಗೆ ಕಾಳಜಿ ವಹಿಸಿ ಪರಿಸರವನ್ನು ಸಂರಕ್ಷಿಸಬಹುದು. ತಮ್ಮ ಊರುಗಳಲ್ಲಿ ವಿದ್ಯಾಭ್ಯಾಸದಿಂದ ವಂಚಿತವಾಗಿರುವ ವಿಧ್ಯಾರ್ಥಿಗಳನ್ನು ಶಾಲೆಗೆ ಸೇರಿಸಿ ಅವರ ಮುಂದಿನ ಭವಿಷ್ಯಕ್ಕೆ ದಾರಿ ದೀಪವಾಗುವಂತೆ ಮಾಡುವುದು ಇಂದಿನ ಯುವ ಜನತೆ ಹಾಗೂ ವಿದ್ಯಾರ್ಥಿಗಳದ್ದಾಗಿದೆ ಎಂದು ತಿಳಿಸಿದರು.
ಶ್ರೀಜಲಧಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ಕಾರ್ಯದರ್ಶಿ ಬಿ.ಟಿ. ರಾಜಣ್ಣ ಮಾತನಾಡುತ್ತ, ಗ್ರಾಮೀಣ ಪ್ರದೇಶದಲ್ಲಿ ಸಮಾಜಕಾರ್ಯ ಕೆಲಸಗಳು ಹೆಚ್ಚಿನದಾಗಿ ನಡೆಯಬೇಕಾಗಿದೆ. ಗ್ರಾಮೀಣ ಯುವ ಸಮುದಾಯಕ್ಕೆ ಮಾರ್ಗದರ್ಶನದ ಕೊರತೆ ಇದೆ. ಗ್ರಾಮೀಣ ಜನರಲ್ಲಿ ಅರಿವು ಮೂಡಿಸಲು ಅನೇಕ ಸಂಸ್ಥೆಗಳು ಗ್ರಾಮೀಣ ಪ್ರದೇಶಗಳತ್ತ ಮುಖ ಮಾಡಬೇಕಿದೆ. ಗ್ರಾಮೀಣ ಪ್ರದೇಶದಲ್ಲಿ ಯುವ ಜನಾಂಗವನ್ನು ಅಭಿವೃದ್ಧಿಪಡಿಸಬೇಕಾದರೆ ಜನರಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ತಿಳಿಯಪಡಿಸಬೇಕು ಎಂದು ತಿಳಿಸಿಕೊಟ್ಟರು.
ಪಾಂಶುಪಾಲೆ ಕವಿತ. ವಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆರ್. ನಾಗರಾಜು, ಉಪನ್ಯಾಸಕ ಶಿವಕುಮಾರ್ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

