ತುಮಕೂರು

ಕಾರ್ಮಿಕ ಅಭ್ಯುದಯಕ್ಕೆ ಸಂಘಟನೆ ಮುಖ್ಯ

Published On :

ತುಮಕೂರು: ಕಾರ್ಮಿಕ ಅಭ್ಯುದಯಕ್ಕೆ ಸಂಘಟನೆ ಅತಿ ಮುಖ್ಯ ಎಂದು ತುಮಕೂರು ಎಪಿಎಂಸಿ ಅಧ್ಯಕ್ಷ ಜಿ.ಎಸ್. ಶಿವಕುಮಾರ್ ಅಭಿಪ್ರಾಯಪಟ್ಟರು.
 ಅವರು ಗೂಳೂರಿನ ಕಾಳಿಕಾಂಬ ದೇವಾಲಯದ ಮುಂಭಾಗ ಆಯೋಜಿಸಲಾಗಿದ್ದ ಕಟ್ಟಡ ಕಾರ್ಮಿಕರ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಸವಲತ್ತು ಪಡೆಯಿರಿ: ಸಂಘಟನೆಗೊಂಡರೆ ತಮ್ಮಲ್ಲಿ ತಿಳುವಳಿಕೆ ಹೆಚ್ಚಿಸಿಕೊಳ್ಳುವುದಲ್ಲದೆ ಸರ್ಕಾರದಿಂದ ಬರುವ ಸವಲತ್ತುಗಳನ್ನು ಪಡೆಯಲು ಆಗ ಮಾತ್ರವೇ ಸಾಧ್ಯವೆಂದ ಅವರು ಇದಕ್ಕೆ ಕಾರ್ಮಿಕರು ಮುಂದಾಗಬೇಕೆಂದು ಕರೆ ನೀಡಿದರು.
 ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ತಾ.ಪಂ. ಮಾಜಿ ಅಧ್ಯಕ್ಷ ಜಿ.ಡಿ. ವಿಜಯಕುಮಾರ್ ಮಾತನಾಡಿ, ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಲಕ್ಷಾಂತರ ಕಾರ್ಮಿಕರು ಸಂಘಟಿತರಾಗುವ ಮೂಲಕ ತಮ್ಮಲ್ಲಿ ಸ್ವಾವಲಂಭನಾ ಬದುಕನ್ನು ರೂಪಿಸಿಕೊಳ್ಳಬೇಕು. ಇದರಿಂದ ಮಾತ್ರವೇ ಕಾರ್ಮಿಕರು ಕಷ್ಟದ ಬದುಕಿನಿಂದ ಹೊರಬರಲು ಸಾದ್ಯವಾಗುತ್ತದೆ ಎಂದರು.
ಅಸಮಾನತೆ ತೊಲಗಲಿ: ಸಮಾವೇಶದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ. ಉಮೇಶ್ ಮಾತನಾಡಿ, ಇಂದು ಶ್ರಮ ಸಂಸ್ಕೃತಿಗಿಂತ ಹಣದ ಮತ್ತು ಬೌದ್ಧಿಕ ಶ್ರಮದ ದುಡಿಮೆ ಹೆಚ್ಚಾಗಿ ಸಮಾಜದಲ್ಲಿ ಅಸಮಾನತೆ ಬೆಳೆಯುತ್ತಿದೆ. ಇದನ್ನು ತಪ್ಪಿಸಲು ಸಂಘಟನೆಗಳು ಜನರಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬೆಳೆಸಬೇಕು ಎಂದರು.
 ಸಿಡಬ್ಲುಎಫ್‌ಐ ರಾಜ್ಯ ಉಪಾಧ್ಯಕ್ಷ ಶ್ರೀಧರ್ ಹಾಗೂ ಗೂಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣೇಗೌಡರು ಕಾರ್ಮಿಕರಿಗೆ ಗುರುತು ಚೀಟಿ ವಿತರಿಸಿದರು.  ಗ್ರಾಮದ ಮುಖಂಡರಾದ ನಾಗರಾಜು, ಹನುಮಂತರಾಜು, ಚಿಕ್ಕಣ್ಣ, ಮತ್ತು ಸಿಐಟಿಯು ಕಟ್ಟಡ ಕಾರ್ಮಿಕ ಸಂಘಟನೆಯ ಜಿಲ್ಲಾ ಖಜಾಂಚಿ ಗೋವಿಂದರಾಜು, ಸಹಕಾರ್ಯದರ್ಶಿ ರಾಮಣ್ಣ, ಮುಖಂಡರಾದ ಸಿದ್ದಪ್ಪ, ಕೆ.ಎಸ್. ಸತ್ಯನಾರಾಯಣರಾಜು, ಹಳೆರಂಗಸ್ವಾಮಿ, ನರಸಿಂಹಮೂರ್ತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.