ಅಲ್ಪಸಂಖ್ಯಾತರಿಗೆ ಶ್ರಮಶಕ್ತಿ ಸಾಲ
ತುಮಕೂರು: ತುಮಕೂರು ನಗರ ಶಾಸಕ ಡಾ. ರಫೀಕ್ ಅಹಮದ್ ಅಲ್ಪಸಂಖ್ಯಾತರಿಗೆ ಶ್ರಮಶಕ್ತಿ ಯೋಜನೆಯ ಸಾಲದ ಚೆಕ್ ವಿತರಣೆ ಮಾಡಿದರು.
ತುಮಕೂರಿನ ಟೌನ್ ಹಾಲ್ನಲ್ಲಿರುವ ಶಾಸಕರ ಕಚೇರಿಯಲ್ಲಿ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಸಾಲ ಸೌಲಭ್ಯ ಯೋಜನೆಯ ಫಲಾನುಭವಿಗಳಿಗೆ ಮಂಜೂರಾಗಿದ್ದ ಸಾಲದ ಚೆಕ್ ವಿತರಿಸಲಾಯಿತು.
ರಾಜ್ಯದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ಹಿನ್ನೆಲೆಯಲ್ಲಿ ಕೈಗೊಳ್ಳಲಾದ ಕಾರ್ಯಕ್ರಮಗಳಾದ ಸ್ವಾವಲಂಬನೆ,ಅರಿವು, ಶ್ರಮಶಕ್ತಿ ಯೋಜನೆಯಲ್ಲಿ ತುಮಕೂರು ನಗರದ 240 ಮುಸ್ಲಿಂ, ಕ್ರಿಶ್ಚಿಯನ್, ಜೈನ ಸಮುದಾಯಗಳ 50 ಫಲಾನುಭವಿಗಳಿಗೆ ಶ್ರಮಶಕ್ತಿ ಯೋಜನೆಯಲ್ಲಿ ಆರ್ಥಿಕ ಅಭಿವೃದ್ಧಿಗಾಗಿ ಮಂಜೂರಾಗಿದ್ದ ತಲಾ ರು. 20 ಸಾವಿರ ಚೆಕ್ ವಿತರಿಸಲಾಯಿತು.
ಅಭಿವೃದ್ಧಿ: ಚೆಕ್ ವಿತರಿಸಿ ಮಾತನಾಡಿದ ಶಾಸಕ ಡಾ.ರಫೀಕ್ ಅಹಮದ್, ಸರಕಾರ ಅಲ್ಪಸಂಖ್ಯಾತರ ಅರ್ಥಿಕ ಅಭಿವೃದ್ಧಿಯ ಉದ್ದೇಶದಿಂದ ಧನಸಹಾಯ ಮಂಜೂರು ಮಾಡಲಾಗಿದೆ. ಇದನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ತಮ್ಮ ಕುಟುಂಬವನ್ನು ಅಭಿವೃದ್ಧಿಪಡಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಪಿ. ಅಹಮದ್ ಮಾತನಾಡಿ, ಸರಕಾರ ಸದುದ್ದೇಶದಿಂದ ಶೇ.50ರ ಸಬ್ಸಿಡಿಯೊಂದಿಗೆ ಸಹಾಯಧನವನ್ನು ಬಿಡುಗಡೆ ಮಾಡಿದೆ. ಈ ಸವಲತ್ತನ್ನು ಸಮರ್ಪಕವಾಗಿ ಬಳಸಿಕೊಂಡು ಕುಟುಂಬದ ಅದಾಯವನ್ನು ಹೆಚ್ಚಿಸಿಕೊಂಡು, ಸಾಲವನ್ನು ಮರುಪಾವತಿ ಮಾಡುವ ಮೂಲಕ ಮತ್ತೊಮ್ಮೆ ಅಗತ್ಯವಿದ್ದರೆ ಸಾಲ ಸೌಲಭ್ಯ ಪಡೆದುಕೊಳ್ಳಬಹುದೆಂದು ಸಲಹೆ ನೀಡಿದರು.
ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಸೈಯದ್ ಅಬೂಬ್ ಕಲಾಂ, ಕ್ಯಾತ್ಸಂದ್ರ ಅಫ್ಸರ್ ಸೇರಿದಂತೆ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

