ಇಂದು ಕಚೇರಿ ಎದುರು ಪ್ರತಿಭಟನೆ
ದಾಂಡೇಲಿ: ನಗರದ ಪೇಪರ್ ಮಿಲ್ನ ಗುತ್ತಿಗೆ ಆಧಾರಿತ ಕೆಲ ಕಾರ್ಮಿಕರನ್ನು ಕಾನೂನುಬಾಹಿರವಾಗಿ ತೆಗೆದು ಹಾಕಿದ್ದು ಕಾರ್ಮಿಕರು ಬೀದಿ ಪಾಲಾಗಿದ್ದು ಅವರಿಗೆ ನ್ಯಾಯ ಸಿಗಬೇಕೆಂದು ಆಗ್ರಹಿಸಿ ನಗರದ ಕಾರ್ಮಿಕ ಇಲಾಖೆ ಕಚೇರಿ ಎದುರು ಫೆ. 4ರಂದು ಪ್ರತಿಭಟನೆ ನಡೆಸುವುದಾಗಿ ರಕ್ಷಣಾ ವೇದಿಕೆ ಅಧ್ಯಕ್ಷ ಶಂಕರ ಮುಂಗರವಾಡಿ ತಿಳಿಸಿದ್ದಾರೆ. ಕಾರ್ಖಾನೆ ಆಡಳಿತ ಮಂಡಳಿ, ಕಾರ್ಮಿಕ ಇಲಾಖೆ ಹಾಗೂ ಜೆಎನ್ಸಿ ಸಮಕ್ಷಮದಲ್ಲಿ ಮಾಡಿಕೊಂಡತಹ ತ್ರಿಪಕ್ಷೀಯ ಒಪ್ಪಂದದ ಉಲ್ಲಂಘನೆ ಮಾಡಿ ಕಾರ್ಮಿಕರಿಗೆ ಅನ್ಯಾಯವಾಗಿದೆ. ಕಾರ್ಮಿಕ ಇಲಾಖೆಗೆ ವಿಷಯ ತಿಳಿಸಿದರೂ, ಯಾವುದೆ ಪ್ರಯೋಜನವಾಗಿಲ್ಲ. ಫೆ. 4ರಂದು ನಗರದ ದಾಂಡೇಲಪ್ಪ ದೇವಸ್ಥಾನದಿಂದ ಮೆರವಣಿಗೆ ಹೊರಟು ಕಾರ್ಮಿಕ ಇಲಾಖೆ ಎದುರು ಪ್ರತಿಭಟನೆ ನಡೆಸಲಿದ್ದೇವೆಂದು ಲಿಖಿತ ಹೇಳಿಕೆಯಲ್ಲಿ ತಿಳಿಸಿದ್ದಾರೆ.
--
ಅಪರಿಚಿತ ಶವ ಪತ್ತೆ
ಭಟ್ಕಳ: ಇಲ್ಲಿನ ಗೊರ್ಟೆ ರೇಲ್ವೆ ಬ್ರಿಜ್ ಸಮೀಪ ಭಾನುವಾರ ಅಪರಿಚಿತ ಶವ ಪತ್ತೆಯಾಗಿದೆ. ಸುಮಾರು 50 ವರ್ಷದ ಪುರುಷ ಶವವಾಗಿದ್ದು, ಈತ ರೈಲಿನಲ್ಲಿ ಪ್ರಯಾಣಿಸುತ್ತಿರುವಾಗ ಆಕಸ್ಮಿಕವಾಗಿ ಕೆಳಗೆ ಬಿದ್ದು ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಈತ ಹರಕಲು ಬಟ್ಟೆ ಧರಿಸಿದ್ದು ಗಡ್ಡಧಾರಿಯಾಗಿದ್ದು, ಭಿಕ್ಷುಕ ವೃತ್ತಿಯವನಾಗಿದ್ದಾನೆ ಎಂದು ಶಂಕಿಸಲಾಗಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಎಸ್ಐ ಲಕ್ಕಪ್ಪ ನಾಯ್ಕ ತನಿಖೆ ಕೈಗೊಂಡಿದ್ದಾರೆ.
ಅಪಘಾತ: ಸಾವು
ಯಲ್ಲಾಪುರ: ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಖಾಸಗಿ ಎಂಜಿನಿಯರನೊಬ್ಬ ಸಾವಿಗೀಡಾದ ಘಟನೆ ಭಾನುವಾರ ಸಂಜೆ 7ಕ್ಕೆ ಕಿರವತ್ತಿ ಬಳಿ ಸಂಭವಿಸಿದೆ. ಬಿಜಾಪುರದ ಎಂಜಿನಿಯರ್ ಮೇಘರಾಜ ಕಠಾರೆ (35) ಸಾವನ್ನಪ್ಪಿದವರಾಗಿದ್ದಾರೆ. ಇವರು ರಾಜು ಶೆಟ್ಟಿ ಎಂಬವರ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

