ರಾಜ್ಯ ಬಜೆಟ್ 2013
ಬಜೆಟ್ನಲ್ಲಿ ಜಿಲ್ಲೆಗೆ ಹೆಚ್ಚಿನ ಯೋಜನೆಗಳು ಬಂದಿಲ್ಲ. ಶಿಕ್ಷಣ ಮಂತ್ರಿಗಳ ತವರು ಕ್ಷೇತ್ರದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಇನ್ನಷ್ಟು ಆದ್ಯತೆ ನೀಡಬಹುದಿತ್ತು. ಘಟ್ಟದ ಮೇಲಿನ ಪ್ರದೇಶಕ್ಕೆ ಬಜೆಟ್ನಲ್ಲಿ ಅನ್ಯಾಯವಾಗಿದೆ.
- ಜಿ.ಎಂ. ಹೆಗಡೆ ಮುಳಖಂಡ, ಎಂಇಎಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ
ಬಜೆಟ್ ಬಿಜೆಪಿ ಸರ್ಕಾರದ ಮುಖವಾಣಿ. ಜಿಲ್ಲೆಗೆ ಅನ್ಯಾಯವಾಗಿದೆ. ಕರಾವಳಿಯನ್ನು ಬಿಟ್ಟರೆ ಉಳಿದ ಕಡೆಗೆ ಹೆಚ್ಚಿನ ಮಹತ್ವ ನೀಡಲಾಗಿಲ್ಲ.
- ವಿವೇಕಾನಂದ ವೈದ್ಯ ,ಮಾಜಿ ಶಾಸಕ, ಶಿರಸಿ
ಕೃಷಿಗೆ ನಿರಂತರ ವಿದ್ಯುತ್ ನೀಡುವ ಭರವಸೆ ನೀಡಲಾಗಿದೆ. ಭರವಸೆಯಂತೆ ನಡೆದುಕೊಳ್ಳಬೇಕು. ಜಿಲ್ಲೆಯ ಸೊಪ್ಪಿನ ಬೆಟ್ಟದ ಒಡೆತನದ ಸಮಸ್ಯೆ, ಜೆಲ್ಲಿ, ಮರಳು ಸಮಸ್ಯೆಯ ಕುರಿತು ನೀಡಿದ ಭರವಸೆ ಭರವಸೆಯಾಗಿಯೇ ಉಳಿದಿದೆ.
- ಎಂ.ವಿ. ಹೆಗಡೆ ಹುಳಗೋಳ
ಬೋಗಸ್ ಬಜೆಟ್. ಈ ಬಜೆಟ್ ಕಾರ್ಯರೂಪಕ್ಕೆ ಬರುವುದಿಲ್ಲ. ಕಳೆದ ಸಾರಿ ಮಂಡಿಸಿದ ಬಜೆಟ್ನಲ್ಲಿ ಶೇ. 20ರಷ್ಟು ಕಾರ್ಯರೂಪಕ್ಕೆ ಬಂದಿಲ್ಲ. ಜನಸಾಮಾನ್ಯರ ಕಣ್ಣೊರೆಸುವ ತಂತ್ರ. ಚುನಾವಣೆ ಹಿನ್ನೆಲೆಯಲ್ಲಿ ಮಂಡಿಸಿರುವ ಬಜೆಟ್ ಇದಾಗಿದೆ.
- ಎ. ರವೀಂದ್ರನಾಥ ನಾಯ್ಕ ಅಧ್ಯಕ್ಷರು, ಜಿಲ್ಲಾ ಹಿಂದುಳಿದ ವರ್ಗಗಳ ವೇದಿಕೆ
ಇದು ಮೀನುಗಾರರ ಬಜೆಟ್ ಆಗಲಿದೆ ಎಂಬ ನಿರೀಕ್ಷೆ ಹುಸಿಯಾಗಿದೆ. ಕನಿಷ್ಠ ರು. 1 ಸಾವಿರ ಕೋಟಿಯನ್ನು ಮೀನುಗಾರಿಕೆಗಾಗಿ ಮೀಸಲಿಡಬೇಕಿತ್ತು. ಆದರೆ ಕಳೆದ ಬಾರಿಗಿಂತ ಬಜೆಟ್ನಲ್ಲಿ ಕಡಿಮೆ ಅನುದಾನ ಒದಗಿಸಲಾಗಿದೆ.
- ಗಣಪತಿ ಮಾಂಗ್ರೆ, ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ
ಬಜೆಟ್ನಲ್ಲಿ ಮಹಿಳೆಯರಿಗೆ ಹಲವು ಯೋಜನೆಗಳನ್ನು ಜಾರಿಗೊಳಿಸುವ ನಿರೀಕ್ಷೆ ಇತ್ತು. ಆದರೆ ಅಂತಹ ಯಾವುದೇ ಮಹತ್ವದ ಘೋಷಣೆ ಇಲ್ಲ. ಉತ್ತರ ಕನ್ನಡ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದಲೂ ಬಜೆಟ್ ಆಶಾದಾಯಕವಾಗಿ ಇಲ್ಲ.
- ಅನು ಕಳಸ, ಸಮಾಜ ಸೇವಕಿ
ಬಜೆಟ್ ರಾಜ್ಯದ ಪ್ರಗತಿಗೆ ಪೂರಕವಾಗಿಲ್ಲ. ಆರ್ಥಿಕ ಬೆಳವಣಿಗೆ ಕುರಿತು ಗಮನ ಹರಿಸಲಾಗಿಲ್ಲ. ಅಲ್ಪಸಂಖ್ಯಾತರಿಗೆ ಇನ್ನೂ ಹೆಚ್ಚಿನ ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕಾಗಿತ್ತು. ಕೃಷಿ ಹಾಗೂ ಮೀನುಗಾರಿಕೆ ಪರವಾಗಿ ಬಜೆಟ್ ಇರಲಿದೆ ಎಂಬ ನಿರೀಕ್ಷೆಯೂ ಪೂರ್ಣ ಪ್ರಮಾಣದಲ್ಲಿ ಈಡೇರಿಲ್ಲ.
- ನಜೀರ ಅಹಮ್ಮದ್ ಯು. ಶೇಖ, ತೆರಿಗೆ ಸಲಹೆಗಾರ
ಹಿಂದುಳಿದವರು ಹಾಗೂ ಬಡವರ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಬೇಕಿತ್ತು. ಗ್ರಾಮಾಂತರ ಪ್ರದೇಶದ ಅಭಿವೃದ್ಧಿಗೆ ಇನ್ನಷ್ಟು ಪರಿಣಾಮಕಾರಿ ಯೋಜನೆಗಳನ್ನು ಪ್ರಕಟಿಸಬೇಕಿತ್ತು. ಬಜೆಟ್ ನಿರಾಶಾದಾಯಕವಾಗಿದೆ.
- ಗಾಯತ್ರಿ ಗೌಡ ಜಿಪಂ ಮಾಜಿ ಅಧ್ಯಕ್ಷೆ
ಅಂಗನವಾಡಿ ನೌಕರರ ಹಾಗೂ ಸಹಾಯಕರಿಗೆ ಗೌರವ ಧನದಲ್ಲಿ ಹೆಚ್ಚಳ ಮಾಡಲಾಗಿದೆ. ಆದರೆ ನಾವು ಕನಿಷ್ಠ ಕೂಲಿ ನಿಗದಿ ಪಡಿಸಿ ಎಂದು ಒತ್ತಾಯಿಸಿದ್ದೆವು. ಆ ಬೇಡಿಕೆಯನ್ನು ಈಡೇರಿಸಿಲ್ಲ. ಚುನಾವಣೆಯ ಮೇಲೆ ಕಣ್ಣಿಟ್ಟಂತೆ ಕಾಣುತ್ತಿದೆ.
- ಯಮುನಾ ಗಾಂವಕರ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

