ಉತ್ತರ ಕನ್ನಡ

ವೈದ್ಯರ ಮುಷ್ಕರ: ರೋಗಿಗಳ ಪರದಾಟ

Published On :

ಶಿರಸಿ: ನಗರಕ್ಕೂ ವೈದ್ಯರ ಮುಷ್ಕರದ ಬಿಸಿ ತಟ್ಟಿದ್ದು, ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳ ಗೋಳು ಹೇಳತೀರದಾಗಿದೆ. ಶಿರಸಿ ಪಂಡಿತ ಸಾರ್ವಜನಿಕ ಆಸ್ಪತ್ರೆಗೆ ಸಿದ್ದಾಪುರ, ಮುಂಡಗೋಡ, ಯಲ್ಲಾಪುರ, ಸೊರಬ, ಹಾನಗಲ್ ತಾಲೂಕುಗಳಿಂದಲೂ ರೋಗಿಗಳು ಆಗಮಿಸುತ್ತಿದ್ದರು. ಮುಷ್ಕರ ಅಧಿಕೃತ ಮಾಡಲಾಗಿದೆ. ತುರ್ತು ಸಂದರ್ಭಗಳಲ್ಲಿ ಮಾತ್ರ ವೈದ್ಯರು ಆಗಮಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಹೀಗಾಗಿ, ಸಾಮಾನ್ಯ ರೋಗಿಗಳ ಪಾಡು ಹೇಳತೀರದು. ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ಇಳಿಮುಖವಾಗಿದೆ. ಬಹುತೇಕರು ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡುತ್ತಿದ್ದಾರೆ. ಜಿಲ್ಲಾಸ್ಪತ್ರೆಗಳನ್ನು ಆರೋಗ್ಯ ಇಲಾಖೆಯಲ್ಲೇ ಮುಂದುವರೆಸಬೇಕು. ವರ್ಗಾವಣೆ ನೀತಿಯಲ್ಲಿ ಬದಲಾವಣೆ ತರಬೇಕು. ಎಎನ್‌ಎಂಗಳ ಮಾಸಿಕ ವೇತನವನ್ನು ಸಮರ್ಪಕವಾಗಿ ನೀಡಬೇಕು ಎಂಬ ಬೇಡಿಕೆ ಮುಂದಿಟ್ಟುಕೊಂಡು ರಾಜ್ಯವ್ಯಾಪಿ ವೈದ್ಯರು ನಡೆಸುತ್ತಿರುವ ಮುಷ್ಕರಕ್ಕೆ ಶಿರಸಿ ಆಸ್ಪತ್ರೆ ವೈದ್ಯರೂ ದನಿಗೂಡಿಸಿದ್ದಾರೆ. ಸೋಮವಾರ ಎಲ್ಲ ವೈದ್ಯರು ಕರ್ತವ್ಯಕ್ಕೆ ಹಾಜರಾಗಬಹುದು ಎನ್ನುವ ಆಶಯವನ್ನು ಹಿರಿಯ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.