ಉತ್ತರ ಕನ್ನಡ

ನಾಲಾಕ್ಕೆ ಬಂದ ಮೊಸಳೆ ಕಾಳಿ ನದಿಗೆ

Published On :

ದಾಂಡೇಲಿ:  ಇಲ್ಲಿನ ಗಾಂಧಿನಗರದ ನಾಲಾದಲ್ಲಿ ಕಂಡುಬಂದ 1.5 ಮೀಟರ್ ಉದ್ದದ ಮೊಸಳೆಯನ್ನು ಸುರಕ್ಷಿತವಾಗಿ ಕಾಳಿ ನದಿಗೆ ಬಿಡಲಾಗಿದೆ ಎಂದು ದಾಂಡೇಲಿಯ ಪರಿಸರ ಸಂರಕ್ಷಣಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. ಫೆ. 13ರಂದು ಈ ಮೊಸಳೆ ನಾಲೆಯಲ್ಲಿ ಪ್ರತ್ಯಕ್ಷವಾಗಿತ್ತು. ಅದನ್ನು ಹಿಡಿಯಲು ಪ್ರಯತ್ನಿಸಿದರೂ ಸಾಧ್ಯವಾಗಿರಲಿಲ್ಲ. ಫೆ. 14ರಂದು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದಿಂದ ಮೊಸಳೆಯನ್ನು ಹಿಡಿಯಲಾಗಿದೆ ಎಂದು ತಿಳಿಸಲಾಗಿದೆ.  
ಈ ಸಂದರ್ಭದಲ್ಲಿ ಪರಿಸರ ಸಂರಕ್ಷಣಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೀರ್ತಿ ಗಾಂವಕರ, ಸಂಸ್ಥೆ ನಿರ್ದೇಶಕ ಮೋಹನ ಹಲವಾಯಿ, ಅನಿಲ ದಂಡಗಲ, ಉದ್ದಿಮೆದಾರ ರಫೀಕ್ ಖಾನ್ ಇದ್ದರು.
ಅರಣ್ಯ ಇಲಾಖೆ ವಲಯ ಅರಣ್ಯಾಧಿಕಾರಿ ಹಿರೇಮಠ ಮಾರ್ಗದರ್ಶನದಲ್ಲಿ ಉಪ ಅರಣ್ಯಾಧಿಕಾರಿ ನದಾಫ್ ಹಾಗೂ ಸಿಬ್ಬಂದಿ ಮೊಸಳೆ  ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ದಾಂಡೇಲಿ ಪರಿಸರ ಸಂರಕ್ಷಣಾ ಸಂಸ್ಥೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.