ಉತ್ತರ ಕನ್ನಡ

ದಾಂಡೇಲಿಯಲ್ಲಿ ಬಂದ್‌ಗೆ ಉತ್ತಮ ಬೆಂಬಲ

Published On :

ದಾಂಡೇಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಎರಡು ದಿನಗಳ ಬಂದ್‌ಗೆ ದಾಂಡೇಲಿಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಆಟೋ ಚಾಲಕರು ಮುಷ್ಕರದಲ್ಲಿ ಪಾಲ್ಗೊಂಡರು. ಬೆಳಗ್ಗೆ  8ರ ವರೆಗೆ ಬಸ್ ಸಂಚಾರ ಇತ್ತು, ಕೆಲ ಅಂಗಡಿಗಳು ತೆರೆದಿದ್ದವು. 10 ಘಂಟೆ ಬಳಿಕ ಅವುಗಳೂ ಬಂದ್ ಆದವು. ಶಾಲೆ ಕಾಲೇಜುಗಳು ಬೆಳಗ್ಗೆ 10ರ ವರೆಗೆ ಕಾರ್ಯ ನಿರ್ವಹಿಸಿದವು. ಕಾರ್ಮಿಕ ಮುಖಂಡರು ನಗರದ ಬಸ್ ನಿಲ್ದಾಣ ಮುಂಭಾಗದಲ್ಲಿ  ಮಾನವ ಸರಪಳಿ ನಿರ್ಮಿಸಿ ಘೋಷಣೆಗಳನ್ನು ಕೂಗಿದರು.
ಕೇಂದ್ರ ಸರ್ಕಾರದ ಆರ್ಥಿಕ ನೀತಿಯನ್ನು ಖಂಡಿಸಲಾಯಿತು.   ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.