ಉತ್ತರ ಕನ್ನಡ

ಚುನಾವಣೆಗೆ ಬಿಜೆಪಿ ಕಾರಣ

Published On :

ಮುಂಡಗೋಡ:  ಸಂದಿಗ್ಧ ಪರಿಸ್ಥಿತಿಯಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ಎದುರಿಸುವಂತಾಗಿರುವುದಕ್ಕೆ ಬಿಜೆಪಿ ಸರ್ಕಾರವೇ ಕಾರಣ. ತರಾತುರಿಯಲ್ಲಿ ಚುನಾವಣೆ ನಡೆಯುತ್ತಿರುವುದರಿಂದ ಕೇಂದ್ರ ಸರ್ಕಾರ ಮಹಿಳೆಯರಿಗೆ ನೀಡಿದ ಶೇ. 50ರಷ್ಟು ಮೀಸಲಾತಿ ವಂಚನೆಯಾಗಿದೆ ಎಂದು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು.
ಗುರುವಾರ ಇಲ್ಲಿಯ ದೈವಜ್ಞ ಸಭಾ ಭವನದಲ್ಲಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಎಲ್ಲ ದೃಷ್ಟಿಯಿಂದ ಕಾಂಗ್ರೆಸ್‌ನತ್ತ ಜನರ ಒಲವಿದೆ. ಪಕ್ಷದಲ್ಲಿ ಭಿನ್ನಾಭಿಪ್ರಾಯವಿರುವುದು ಸಹಜ. ಪಕ್ಷದಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವುದರಿಂದ ಅಸಮಾಧಾನ ಹೆಚ್ಚಲು ಕಾರಣವಾಗಿದೆ. ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಯಾವುದೇ ಭಿನ್ನಾಭಿಪ್ರಾಯವಿಲ್ಲದಂತೆ ಪ್ರಚಾರ ನಡೆಸಬೇಕು ಎಂದು ಹೇಳಿದರು. ರಾಜ್ಯದಲ್ಲಿ ಹೆಚ್ಚಿನ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ ಅಧಿಕಾರ ಚುಕ್ಕಾಣಿ ಹಿಡಿಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಯಲ್ಲಾಪುರ-ಮುಂಡಗೋಡ ಕ್ಷೇತ್ರದ ಕಾಂಗ್ರೆಸ್ ಧುರೀಣ ಶಿವರಾಮ ಹೆಬ್ಬಾರ ಮಾತನಾಡಿ, ಯಾವುದೇ ಪಕ್ಷದಲ್ಲಿ ಭಿನ್ನಾಭಿಪ್ರಾಯ ಸಹಜ. ಮುಂಡಗೋಡ ಹಾಗೂ ಯಲ್ಲಾಪುರ ಪಪಂ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗಳಿಸಲಿದೆ ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ, ಧುರೀಣ ಪ್ರಮೋದ ಹೆಗಡೆ, ತಾಪಂ ಅಧ್ಯಕ್ಷೆ ಕೊಂಡುಬಾಯಿ ಜೋರೆ, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿಗೌಡ ಪಾಟೀಲ, ಎಲ್.ಟಿ.ಪಾಟೀಲ, ಬಿ.ಎಪ್. ಬೆಂಡಿಗೇರಿ, ಸುಮಾ ಲಮಾಣಿ, ಎಚ್.ಎಂ. ನಾಯ್ಕ, ಪಿ.ಎಸ್. ಸಂಗೂರಮಠ, ಕೆ.ಬಿ. ಕೊಳ್ಳಾನವರ, ರಾಮಣ್ಣ ಪಾಲೇಕರ, ಶಾರದಾ ರಾಥೋಡ, ರಾಜು ಹಿರೇಮಠ ಇದ್ದರು. ಎಫ್.ಡಿ. ಗುಲ್ಯಾನವರ ಸ್ವಾಗತಿಸಿದರು. ಪಿ.ಜಿ. ಪುರುಷನ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.