ಉತ್ತರ ಕನ್ನಡ

ಟಿಪ್ಪು ಕಟೌಟ್‌ಗೆ ಸಗಣಿ: ಪ್ರತಿಭಟನೆ

Published On :

ಯಲ್ಲಾಪುರ: ಈದ್ ಮಿಲಾದ್ ಹಬ್ಬದಂದು ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಟಿಪ್ಪು ಸುಲ್ತಾನ್ ಕಟೌಟ್‌ಗೆ ಶನಿವಾರ ಮಧ್ಯರಾತ್ರಿ ದುಷ್ಕರ್ಮಿಗಳು ಸಗಣಿ ಹಚ್ಚಿ ಅವಮಾನಗೊಳಿಸಿದ್ದಾರೆಂದು ಒಂದು ಕೋಮಿನ ಯುವಕರು ರಾಷ್ಟ್ರೀಯ ಹೆದ್ದಾರಿಯ ಪೊಲೀಸ್ ಠಾಣೆ ಎದುರು ಭಾನುವಾರ ಪ್ರತಿಭಟನೆ ನಡೆಸಿದರು. ಪಟ್ಟಣದಲ್ಲಿ ಈದ್ ಮಿಲಾದ್ ಹಬ್ಬದಾಚರಣೆಯ ಹಿನ್ನೆಲೆಯಲ್ಲಿ ರಸ್ತೆಯ ಎರಡೂ ಕಡೆಗಳಲ್ಲಿ ಪತಾಕೆಗಳು ಮತ್ತು ಕಟೌಟಗಳನ್ನು ನಿಲ್ಲಿಸಿದ್ದರು. ಆದರೆ ಭಾನುವಾರ ಬೆಳಗಾಗುವುದರೊಳಗೆ ಟಿಪ್ಪು ಸುಲ್ತಾನ್ ಕಟೌಟ್‌ಗೆ ಸಗಣಿ ಹಚ್ಚಿರುವುದು ಒಂದು ಕೋಮಿನ ಆಕ್ರೋಶಕ್ಕೆ ಕಾರಣವಾಯಿತು. ಘಟನೆ ಗಂಭೀರತೆ ಅರಿತ ಪೊಲೀಸ್ ನಿರೀಕ್ಷಕ ಅರವಿಂದ ಕಲಗುಜ್ಜಿ, ಶಿರಸಿ ಡಿವೈಎಸ್‌ಪಿ ಎನ್.ಡಿ. ಬಿರ್ಜೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಪ್ರತಿಭಟನೆಯಲ್ಲಿ ನಿರತರಾದ ಯುವಕರ ಮನವೊಲಿಸಿ ವಾಹನ ಸಂಚಾರ ಸುಗಮಗೊಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.