ಜೆಡಿಎಸ್ನಲ್ಲಿ ಸ್ಪಂದನಶೀಲ ನಾಯಕರು
ಕುಮಟಾ: ಜನತಂತ್ರದ ಅತಿ ದೊಡ್ಡ ಶಕ್ತಿ ನಾಯಕರು. ಜೆಡಿಎಸ್ನಲ್ಲಿ ಸ್ಪಂದನಶೀಲ ನಾಯಕರಿದ್ದಾರೆ, ಸುಲಭವಾಗಿ ಜನರ ಸಂಪರ್ಕಕ್ಕೆ ಸಿಗುತ್ತಾರೆ. ಹೀಗಾಗಿ, ಮುಂದಿನ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷ ಜೆಡಿಎಸ್ ಅಭ್ಯರ್ಥಿಗಳನ್ನೇ ಆಯ್ಕೆ ಮಾಡುವಂತೆ ಜೆಡಿಎಸ್ ವಕ್ತಾರ ವೈ.ಎಸ್.ವಿ. ದತ್ತಾ ಮನವಿ ಮಾಡಿದರು.
ಸೋಮವಾರ ಸಂಜೆ ಇಲ್ಲಿಯ ಹವ್ಯಕ ಸಭಾಭವನದಲ್ಲಿ ಜರುಗಿದ ಜನತಾದಳ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕಿ ಸೋನಿಯಾರನ್ನು ಭೇಟಿಯಾಗಲು ಸಿದ್ದರಾಮಯ್ಯ ಅವರಂಥವರೇ ದಿನಗಟ್ಟಲೆ ಕಾಯಬೇಕಾಗಿದೆ. ರಾಹುಲ್ ಗಾಂಧಿ ಸಿಗಬೇಕಾದರೆ ಅದಕ್ಕಿಂತಲೂ ಹೆಚ್ಚು ಕಾಯಬೇಕು. ಜನಸಾಮಾನ್ಯರು ಅವರನ್ನು ಭೇಟಿಯಾಗಿ ದುಃಖ-ದುಮ್ಮಾನ ಹೇಳಿಕೊಳ್ಳುವುದು ಸಾಧ್ಯವೇ? ಸುಲಭವಾಗಿ ಭೇಟಿಗೆ ಸಿಗುವ ನಾಯಕರನ್ನೇ ಮತದಾರರು ಆಯ್ಕೆ ಮಾಡಬೇಕು. ರಾಜ್ಯ ರಾಜಕಾರಣದಲ್ಲಿ ಪ್ರಾದೇಶಿಕ ಪಕ್ಷಗಳತ್ತ ಒಲವು ಹೆಚ್ಚುತ್ತಿದೆ ಎಂದರು.
ಬಿಜೆಪಿ ಬಯ್ಯಲಾಗದಷ್ಟು ಕೆಟ್ಟು ಹೋಗಿದೆ ಎಂದ ದತ್ತಾ, ಕಾಂಗ್ರೆಸ್ನ್ನು ತರಾಟೆಗೆ ತೆಗೆದುಕೊಂಡರು. ರಚನಾತ್ಮಕ ವಿರೋಧ ಪಕ್ಷವಾಗಿ ಕೆಲಸ ಮಾಡುವುದನ್ನು ಬಿಟ್ಟು ಸಾಮರಸ್ಯದ ನಡಿಗೆ ಮಾಡುವುದರಲ್ಲಿ ನಿರತವಾಗಿದೆ ಎಂದು ಆರೋಪಿಸಿದರು. ವೇದಿಕೆಯಲ್ಲಿ ಶಾಸಕ ದಿನಕರ ಶೆಟ್ಟಿ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಪ್ರಭಾಕರ ರಾಣೆ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರಾಜೇಶ್ವರಿ ಹೆಗಡೆ, ಪ್ರಮುಖರಾದ ಬಿ.ಆರ್. ನಾಯ್ಕ, ಗಣಪಯ್ಯ ಗೌಡ, ಹರೀಶ ನಾಯ್ಕ, ಜಯವಂತ ಪಟಗಾರ, ಇನಾಯುತುಲ್ಲಾ ಶಾಬಂದ್ರಿ, ಪ್ರದೀಪ ನಾಯಕ, ರಾಮು ಕೆಂಚನ್ ಇದ್ದರು. ಕ್ಷೇತ್ರಾಧ್ಯಕ್ಷ ನೀಲಪ್ಪ ಗೌಡ ಪ್ರಾಸ್ತಾವಿಕ ಮಾತನಾಡಿದರು. ರಾಜು ಪಟಗಾರ ಸ್ವಾಗತಿಸಿ, ನಿರೂಪಿಸಿದರು. ಸಮಾರಂಭದಲ್ಲಿ ಅನೇಕ ಕಾರ್ಯಕರ್ತರು ಜೆಡಿಎಸ್ ಸೇರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

