ಉತ್ತರ ಕನ್ನಡ

ಮಾಹಿತಿ ನೀಡಲು ವಿನಂತಿ

Published On :

ಕಾರವಾರ: ಈ ಭಾವಚಿತ್ರದಲ್ಲಿರುವ ವ್ಯಕ್ತಿ ಹೆಸರು ರಮೇಶ್. ಸದ್ಯಕ್ಕೆ ಪಾಕಿಸ್ತಾನದ ಲಾಹೋರ್ ಜೈಲಿನಲ್ಲಿದ್ದಾರೆ. ಇವರ ಬಗ್ಗೆ ವಿವರ ಗೊತ್ತಿದ್ದಲ್ಲಿ ಮಾಹಿತಿ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಠರು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ. ಪಾಕಿಸ್ತಾನದ ಲಾಹೋರ್ ಜೈಲಿನಲ್ಲಿದ್ದು, ರಮೇಶ್ ತಮ್ಮ ಬಗ್ಗೆ ಉಳಿದ ವಿವರಗಳನ್ನು ತಿಳಿಸಿಲ್ಲ ಎಂದು ಕೇಂದ್ರ ಸಚಿವಾಲಯದಿಂದ ಮಾಹಿತಿ ಬಂದಿದೆ. ಅದರಂತೆ ರಮೇಶ್, ಅವರ ಕುಟುಂಬ, ಸ್ನೇಹಿತರು ಹಾಗೂ ಇವರೊಂದಿಗೆ ಸಂಪರ್ಕ ಹೊಂದಿದವರ ವ್ಯಕ್ತಿಗಳ ಕುರಿತು ಯಾವುದೇ ಮಾಹಿತಿ ಸಿಕ್ಕಲ್ಲಿ ಕೂಡಲೇ ಹತ್ತಿರದ ಪೊಲೀಸ್ ಠಾಣೆ ಅಥವಾ ವೃತ್ತ ಕಚೇರಿ, ಉಪವಿಭಾಗ ಕಚೇರಿ, ಜಿಲ್ಲಾ ಪೊಲೀಸ್ ಕಚೇರಿಯನ್ನು (08382-225250) ಸಂಪರ್ಕಿಸಿ ಮಾಹಿತಿ ನೀಡಿದ್ದಲ್ಲಿ ರಮೇಶ್ ಇವರನ್ನು ಪಾಕಿಸ್ತಾನದ ಜೈಲಿನಿಂದ ಬಿಡುಗಡೆಗೊಳಿಸಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ದಿಲೀಪ್ ಸಾರ್ವಜನಿಕರಲ್ಲಿ ಕೋರಿದ್ದಾರೆ.
ಜೂಜಾಟ: ಮಹಿಳೆ ಬಂಧನ
ಕಾರವಾರ: ಮಟ್ಕಾ ಜೂಜಾಟದಲ್ಲಿ ನಿರತಳಾಗಿದ್ದ ಇಲ್ಲಿನ ನಂದನಗದ್ದಾದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಅಂಜಲಿ ವಿನಾಯಕ ಕಾಣಕೋಣಕರ ಬಂಧಿತ ಮಹಿಳೆ. ಈಕೆ ಮಟ್ಕಾ ಜೂಜಿನಲ್ಲಿ ನಿರತಳಾಗಿದ್ದಾಗ ತಮ್ಮ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ ಪಿಎಸ್‌ಐ ಎನ್.ಜಿ. ಮುಕ್ರಿ ಈಕೆಯನ್ನು ಬಂಧಿಸಿ, ಮಟ್ಕಾ ಆಡಲು ಬಳಿಸಿದ ಸಲಕರಣೆ ಹಾಗೂ ರು. 130 ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.